< Acts 23 >

1 and Paul looking earnestly at the sanhedrim, said, "Brethren, I have lived in all good conscience before God even to this day:"
ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.
2 but the high priest Ananias ordered those that stood next him, to smite him on the mouth.
ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ;
3 Then said Paul to him, "God will smite thee, thou whited wall: dost thou sit to judge me according to the law, and contrary to the law commandest me to be smitten?"
“ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು.
4 But they that stood by said, Revilest thou God's high-priest?
ಹತ್ತಿರ ನಿಂತಿದ್ದವರು; “ದೇವರು ನೇಮಿಸಿದ ಮಹಾಯಾಜಕನನ್ನು ನೀನು ಬೈಯುತ್ತೀಯಾ?” ಅನ್ನಲು,
5 And Paul said, I was not aware, brethren, that it was the high-priest: for it is written, Thou shalt not speak evil of the ruler of thy people.
ಪೌಲನು; “ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿದಿರಲಿಲ್ಲ. ನಿನ್ನ ಜನರಲ್ಲಿ ಅಧಿಪತಿಯಾಗಿರುವವನ ವಿಷಯವಾಗಿ ಕೆಟ್ಟದ್ದೇನೂ ಆಡಬಾರದೆಂದು ಬರೆದದೆಯಷ್ಟೆ” ಅಂದನು.
6 But Paul, knowing that the one part were sadducees, and the other pharisees, cried out in the sanhedrim, "Brethren, I am a pharisee, the son of a pharisee: for the hope of a resurrection of the dead I am now prosecuted."
ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.
7 Upon his saying this, there rose a contention between the pharisees and the sadducees; and the people were divided.
ಇದನ್ನು ಅವನು ಹೇಳಿದಾಗ ಫರಿಸಾಯರಿಗೂ, ಸದ್ದುಕಾಯರಿಗೂ ಜಗಳ ಹುಟ್ಟಿತು; ಸಭೆಯಲ್ಲಿ ಒಡಕುಂಟಾಯಿತು.
8 For the sadducees say that there is no resurrection, nor angel, nor spirit; but the pharisees acknowledge both.
ಏಕೆಂದರೆ, ಪುನರುತ್ಥಾನವಾಗಲಿ, ದೇವದೂತನಾಗಲಿ, ದೇಹವಿಲ್ಲದ ಆತ್ಮವಾಗಲಿ ಇಲ್ಲವೆಂದು ಸದ್ದುಕಾಯರು ಹೇಳುವರು. ಆದರೆ ಇವೆರಡೂ ಉಂಟೆಂದು ಫರಿಸಾಯರು ಒಪ್ಪಿಕೊಳ್ಳುವರು.
9 So there was a great clamor: and the scribes that were of the party of the pharisees rose up and contended, saying, We find no evil in this man; but if a spirit or an angel hath spoken to him, let us not fight against God.
ಆಗ ದೊಡ್ಡ ಕೂಗಾಟವಾಯಿತು. ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳಲ್ಲಿ ಕೆಲವರು ಎದ್ದು; “ಈ ಮನುಷ್ಯನಲ್ಲಿ ನಮಗೆ ಕೆಟ್ಟದ್ದೇನೂ ಕಂಡುಬರುವುದಿಲ್ಲ; ಆತ್ಮವಾಗಲಿ, ದೇವದೂತನಾಗಲಿ, ಅವನ ಸಂಗಡ ಮಾತನಾಡಿದ್ದರೂ, ಮಾತನಾಡಿರಬಹುದು” ಎಂದು ವಾದಿಸಿದರು.
10 But as there arose much contention, the tribune fearing least Paul should be torn in pieces by them, ordered a party of soldiers to go down, and take him by force out of the midst of them, and to bring him into the castle.
೧೦ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.
11 And the following night, the Lord standing by him said, Paul, be of good courage; for as thou hast testified concerning me at Jerusalem, so must thou also bear testimony at Rome.
೧೧ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು.
12 And when it was day, some of the Jews, having formed a conspiracy, bound themselves with a curse, saying, that they would neither eat nor drink till they had killed Paul.
೧೨ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.
13 And they were more than forty that had made this oath:
೧೩ಹೀಗೆ ಮಾಡಿದವರು ನಲವತ್ತು ಮಂದಿಗಿಂತ ಹೆಚ್ಚಾಗಿದ್ದರು.
14 who came to the chief priests and the elders, and said, "We have bound ourselves by a curse to eat nothing till we have killed Paul.
೧೪ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.
15 Now therefore do ye with the rest of the sanhedrim signify to the tribune, that he would bring him down to you to-morrow, as if you would examine more accurately some things concerning him: and we are ready to dispatch him before he come near you."
೧೫ಆದುದರಿಂದ ನೀವು ಸಭೆಯವರ ಸಹಿತ ಸಹಸ್ರಾಧಿಪತಿಯ ಬಳಿಗೆ ಹೋಗಿ, ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕೆಂದು ನೆವಹೇಳಿ ಅವನನ್ನು ಕೋಟೆಯೊಳಗೆ ನಿಮ್ಮ ಬಳಿಗೆ ಕರೆದುಕೊಂಡು ಬರುವ ಹಾಗೆ ಕೇಳಿಕೊಳ್ಳಬೇಕು. ನಾವಾದರೋ, ಅವನು ಹತ್ತಿರ ಬರುವುದಕ್ಕಿಂತ ಮೊದಲೇ ಅವನನ್ನು ಕೊಲ್ಲುವುದಕ್ಕೆ ಸಿದ್ಧವಾಗಿದ್ದೇವೆ” ಅಂದರು.
16 But Paul's sister's son, hearing of the ambush, came and entered into the castle, and told Paul.
೧೬ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.
17 Then Paul called one of the centurions to him, and said, Introduce this young man to the tribune; for he hath something to tell him.
೧೭ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.
18 So he took him and brought him to the tribune, and said, Paul the prisoner called me to him, and desired me to introduce this young man unto thee, as having something to say to thee.
೧೮ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು,
19 And the tribune took him by the hand, and retiring into a private apartment asked him, What is it which thou hast to tell me?
೧೯ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.
20 And he said, The Jews have agreed to desire thee, that thou wouldest bring down Paul to-morrow to the council, as if they would inquire something more strictly concerning him.
೨೦ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.
21 But do not thou comply with them: for there lie in wait for him more than forty men of them, who have bound themselves with a curse neither to eat nor drink till they have killed him: and they are now ready, waiting for an order from thee.
೨೧ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು.
22 Then the tribune dismissed the young man, charging him, Tell no one that thou hast discovered these things to me.
೨೨ಆಗ ಸಹಸ್ರಾಧಿಪತಿಯು ಆ ಯೌವನಸ್ಥನಿಗೆ; “ಈ ಸಂಗತಿಗಳನ್ನು ನನಗೆ ಸೂಚಿಸಿದ್ದನ್ನು ನೀನು ಯಾರಿಗೂ ಹೇಳಬೇಡ” ಎಂದು ಖಂಡಿತವಾಗಿ ಅಪ್ಪಣೆ ಕೊಟ್ಟು ಅವನನ್ನು ಕಳುಹಿಸಿಬಿಟ್ಟನು.
23 And he called two of the centurions to him, and said, Get ready two hundred soldiers to go to Cesarea, and seventy horsemen, and two hundred spearmen, by the third hour of the night.
೨೩ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”
24 And provide beasts, that they may set Paul on and bring him safe to Felix the governor.
೨೪ಮತ್ತು ಕುದುರೆಗಳನ್ನು ಸಿದ್ಧಮಾಡಿ, ಪೌಲನನ್ನು ಹತ್ತಿಸಿ, ದೇಶಾಧಿಪತಿಯಾದ ಫೇಲಿಕ್ಸನ ಬಳಿಗೆ ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟನು.
25 And he wrote a letter to this effect:
೨೫ಇದಲ್ಲದೆ ಈ ಕೆಳಗಣ ಅಭಿಪ್ರಾಯದ ಒಂದು ಪತ್ರವನ್ನು ಬರೆದನು, ಅದೇನೆಂದರೆ;
26 Claudius Lysias to the most excellent governor Felix sendeth greeting.
೨೬“ಮಹಾರಾಜರಾಜಶ್ರೀ ದೇಶಾಧಿಪತಿಯಾದ ಫೇಲಿಕ್ಸನಿಗೆ ಕ್ಲೌದ್ಯ ಲೂಸ್ಯನು ಮಾಡುವ ವಂದನೆ.
27 This man being seized by the Jews, and about to be killed by them, I came upon them with some soldiers and rescued him: for I understand that he is a Roman.
೨೭ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.
28 But desiring to know the cause for which they accused him, I brought him down into their council:
೨೮ಇದಲ್ಲದೆ ಅವನ ಮೇಲೆ ತಪ್ಪು ಹೊರಿಸಿದ ಕಾರಣವನ್ನು ತಿಳಿಯಲಪೇಕ್ಷಿಸಿ, ಅವನನ್ನು ಅವರ ಹಿರೀಸಭೆಗೆ ಕರೆದುಕೊಂಡು ಹೋದೆನು.
29 and I found he was accused about questions of their law, but had no charge against him deserving death or bonds.
೨೯ಅಲ್ಲಿ ಅವರು ತಮ್ಮ ಧರ್ಮಶಾಸ್ತ್ರ ವಿಷಯಗಳನ್ನು ಹಿಡಿದು ಅವನ ವಿರುದ್ಧ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲಿ, ಬೇಡಿಗಾಗಲಿ ಆಧಾರವಾದ ಯಾವ ಅಪರಾಧವನ್ನೂ ಹೊರಿಸಲಿಲ್ಲವೆಂದು ನನಗೆ ಕಂಡುಬಂತು.
30 But an ambush, which was going to be laid for the man by the Jews, being discovered to me, immediately I sent him to thee, telling his accusers also to say before thee what they had against him. Farewell.
೩೦ಈ ಮನುಷ್ಯನಿಗೆ ವಿರುದ್ಧವಾಗಿ ಒಳಸಂಚು ನಡೆಯುತ್ತಿದೆ ಎಂದು ನನಗೆ ತಿಳಿದುಬಂದ್ದುದರಿಂದ ಕೂಡಲೆ, ನಾನು ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ, ಅವನ ವಿರುದ್ಧ ತಪ್ಪುಹೊರಿಸುವವರಿಗೆ ನಿನ್ನ ಮುಂದೆಯೇ ಅವನಿಗೆ ವಿರುದ್ಧವಾಗಿ ವಾದ ಮಂಡಿಸುವ ಹಾಗೆ ಅಪ್ಪಣೆ ಕೊಟ್ಟೆನು” ಎಂಬುದೇ.
31 The soldiers therefore, according to the orders given them, took up Paul, and brought him by night to Antipatris.
೩೧ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು.
32 And the next day they returned to the castle, leaving the horsemen to go with him;
೩೨ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು.
33 who, when they came into Cesarea, and delivered the epistle to the governor, presented Paul also before him.
೩೩ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.
34 And when the governor had read the letter, and asked of what province he was; being informed that he was of Cilicia, he said,
೩೪ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು;
35 I will hear thee, when thine accusers are also come. And he ordered him to be kept in Herod's palace.
೩೫“ನಿನ್ನ ಮೇಲೆ ತಪ್ಪು ಹೊರಿಸುವವರು ಬಂದ ನಂತರ, ನಿನ್ನ ಕಾರ್ಯವನ್ನು ಪೂರ್ಣವಾಗಿ ವಿಚಾರಿಸುತ್ತೇನೆ” ಎಂದು ಹೇಳಿ, ಅವನನ್ನು ಹೆರೋದನ ಅರಮನೆಯಲ್ಲಿ ಇಟ್ಟು ಕಾಯಬೇಕೆಂಬುದಾಗಿ ಅಪ್ಪಣೆಮಾಡಿದನು.

< Acts 23 >