< הוֹשֵׁעַ 9 >

אַל־תִּשְׂמַ֨ח יִשְׂרָאֵ֤ל ׀ אֶל־גִּיל֙ כָּֽעַמִּ֔ים כִּ֥י זָנִ֖יתָ מֵעַ֣ל אֱלֹהֶ֑יךָ אָהַ֣בְתָּ אֶתְנָ֔ן עַ֖ל כָּל־גָּרְנ֥וֹת דָּגָֽן׃ 1
ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.
גֹּ֥רֶן וָיֶ֖קֶב לֹ֣א יִרְעֵ֑ם וְתִיר֖וֹשׁ יְכַ֥חֶשׁ בָּֽהּ׃ 2
ಕಣವೂ, ದ್ರಾಕ್ಷಿಯ ತೊಟ್ಟಿಯೂ ನಿನ್ನ ಜನರಿಗೆ ಜೀವನ ಆಧಾರವಾಗುವುದಿಲ್ಲ; ಹೊಸ ದ್ರಾಕ್ಷಾರಸದ ನಿರೀಕ್ಷೆಯು ಅವರಿಗೆ ವ್ಯರ್ಥವಾಗಿ ಹೋಗುವುದು.
לֹ֥א יֵשְׁב֖וּ בְּאֶ֣רֶץ יְהוָ֑ה וְשָׁ֤ב אֶפְרַ֙יִם֙ מִצְרַ֔יִם וּבְאַשּׁ֖וּר טָמֵ֥א יֹאכֵֽלוּ׃ 3
ಅವರು ಯೆಹೋವನ ದೇಶದಲ್ಲಿ ಇನ್ನು ವಾಸಿಸರು. ಎಫ್ರಾಯೀಮ್ಯರು ಐಗುಪ್ತಕ್ಕೆ ಹಿಂದಿರುಗುವರು, ಅಶ್ಶೂರದಲ್ಲಿ ಅವರು ಹೊಲಸಾದ ಆಹಾರವನ್ನು ತಿನ್ನುವರು.
לֹא־יִסְּכ֨וּ לַיהוָ֥ה ׀ יַיִן֮ וְלֹ֣א יֶֽעֶרְבוּ־לוֹ֒ זִבְחֵיהֶ֗ם כְּלֶ֤חֶם אוֹנִים֙ לָהֶ֔ם כָּל־אֹכְלָ֖יו יִטַמָּ֑אוּ כִּֽי־לַחְמָ֣ם לְנַפְשָׁ֔ם לֹ֥א יָב֖וֹא בֵּ֥ית יְהוָֽה׃ 4
ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ.
מַֽה־תַּעֲשׂ֖וּ לְי֣וֹם מוֹעֵ֑ד וּלְי֖וֹם חַג־יְהוָֽה׃ 5
ನೀವು ಹಬ್ಬದ ದಿನದಲ್ಲಿ, ಯೆಹೋವನ ಮಹೋತ್ಸವ ದಿನದಲ್ಲಿ ಏನು ಮಾಡುವಿರಿ?
כִּֽי־הִנֵּ֤ה הָֽלְכוּ֙ מִשֹּׁ֔ד מִצְרַ֥יִם תְּקַבְּצֵ֖ם מֹ֣ף תְּקַבְּרֵ֑ם מַחְמַ֣ד לְכַסְפָּ֗ם קִמּוֹשׂ֙ יִֽירָשֵׁ֔ם ח֖וֹחַ בְּאָהֳלֵיהֶֽם׃ 6
ಆಹಾ, ಅವರು ವಿನಾಶದ ದೇಶವನ್ನು ಬಿಟ್ಟುಹೋಗುವರು; ಐಗುಪ್ತವು ಅವರಿಗೆ ಸ್ಮಶಾನವಾಗುವುದು, ಮೋಫ್ ಪಟ್ಟಣವು ಅವರನ್ನು ಹೂಣಿಡುವುದು; ಅವರ ಇಷ್ಟದ ಬೆಳ್ಳಿಯ ಒಡವೆಗಳು ಮುಳ್ಳು ಪೊದೆಗಳ ಪಾಲಾಗುವವು; ಮುಳ್ಳುಗಿಡಗಳು ಅವರ ಗುಡಾರಗಳಲ್ಲಿ ಹುಟ್ಟಿಕೊಳ್ಳುವವು.
בָּ֣אוּ ׀ יְמֵ֣י הַפְּקֻדָּ֗ה בָּ֚אוּ יְמֵ֣י הַשִׁלֻּ֔ם יֵדְע֖וּ יִשְׂרָאֵ֑ל אֱוִ֣יל הַנָּבִ֗יא מְשֻׁגָּע֙ אִ֣ישׁ הָר֔וּחַ עַ֚ל רֹ֣ב עֲוֺנְךָ֔ וְרַבָּ֖ה מַשְׂטֵמָֽה׃ 7
ದಂಡನೆಯ ದಿನಗಳು ಹತ್ತಿರವಾಗಿದೆ, ಮುಯ್ಯಿತೀರಿಸುವ ದಿನಗಳು ಸಮೀಪಿಸಿವೆ. ಅದು ಇಸ್ರಾಯೇಲಿನ ಅನುಭವಕ್ಕೆ ಬಂದೇ ಬರುವವು; ಇಸ್ರಾಯೇಲೇ, ನಿನ್ನ ಅಧರ್ಮವು ಬಹಳವಾಗಿರುವುದರಿಂದಲೂ, ವಿರೋಧವು ಹೆಚ್ಚಾಗಿರುವುದರಿಂದಲೂ, “ಪ್ರವಾದಿಯು ಮೂರ್ಖನು ಮತ್ತು ದೇವರಾತ್ಮ ಪ್ರೇರಿತನು ಹುಚ್ಚನು” ಅಂದುಕೊಳ್ಳುತ್ತೀ.
צֹפֶ֥ה אֶפְרַ֖יִם עִם־אֱלֹהָ֑י נָבִ֞יא פַּ֤ח יָקוֹשׁ֙ עַל־כָּל־דְּרָכָ֔יו מַשְׂטֵמָ֖ה בְּבֵ֥ית אֱלֹהָֽיו׃ 8
ಎಫ್ರಾಯೀಮು ನನ್ನ ದೇವರ ವಿಷಯವಾಗಿ ಹೊಂಚು ಹಾಕುತ್ತದೆ; ಪ್ರವಾದಿಯ ಮಾರ್ಗಗಳಲ್ಲೆಲ್ಲಾ ಬೇಟೆಗಾರನ ಬಲೆಯು ಒಡ್ಡಿದೆ, ಅವನ ದೇವರ ಆಲಯದಲ್ಲಿಯೂ ಶತ್ರುವಿನ ವಿರೋಧವು ಕಾದಿದೆ.
הֶעְמִֽיקוּ־שִׁחֵ֖תוּ כִּימֵ֣י הַגִּבְעָ֑ה יִזְכּ֣וֹר עֲוֺנָ֔ם יִפְק֖וֹד חַטֹּאותָֽם׃ ס 9
ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.
כַּעֲנָבִ֣ים בַּמִּדְבָּ֗ר מָצָ֙אתִי֙ יִשְׂרָאֵ֔ל כְּבִכּוּרָ֤ה בִתְאֵנָה֙ בְּרֵ֣אשִׁיתָ֔הּ רָאִ֖יתִי אֲבֽוֹתֵיכֶ֑ם הֵ֜מָּה בָּ֣אוּ בַֽעַל־פְּע֗וֹר וַיִּנָּֽזְרוּ֙ לַבֹּ֔שֶׁת וַיִּהְי֥וּ שִׁקּוּצִ֖ים כְּאָהֳבָֽם׃ 10
೧೦ಕಾಡಿನಲ್ಲಿ ದ್ರಾಕ್ಷಿಯ ಹಣ್ಣು ಸಿಕ್ಕಿದಂತೆ ಇಸ್ರಾಯೇಲು ನನಗೆ ಸಿಕ್ಕಿತು; ಹೊಸದಾಗಿ ಫಲಕ್ಕೆ ಬಂದ ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪೂರ್ವಿಕರನ್ನು ಕಂಡೆನು. ಆದರೆ ಅವರು ಬಾಳ್ ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾಗಿ ದೀಕ್ಷೆಗೊಂಡು, ತಾವು ಪ್ರೀತಿಸಿದ ದೇವತೆಯ ಹಾಗೆ ಅಸಹ್ಯರಾದರು.
אֶפְרַ֕יִם כָּע֖וֹף יִתְעוֹפֵ֣ף כְּבוֹדָ֑ם מִלֵּדָ֥ה וּמִבֶּ֖טֶן וּמֵהֵרָיֽוֹן׃ 11
೧೧ಎಫ್ರಾಯೀಮ್ಯರ ಮಹಿಮೆಯು ಪಕ್ಷಿಯಂತೆ ಹಾರಿಹೋಗುವುದು; ಯಾರೂ ಹೆರರು, ಗರ್ಭಿಣಿಯಾಗುವುದಿಲ್ಲ, ಗರ್ಭಧರಿಸರು.
כִּ֤י אִם־יְגַדְּלוּ֙ אֶת־בְּנֵיהֶ֔ם וְשִׁכַּלְתִּ֖ים מֵֽאָדָ֑ם כִּֽי־גַם־א֥וֹי לָהֶ֖ם בְּשׂוּרִ֥י מֵהֶֽם׃ 12
೧೨ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ, ಯಾರೂ ಉಳಿಯದಂತೆ ಮಾಡಿ ಅವರಿಗೆ ಪುತ್ರ ಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!
אֶפְרַ֛יִם כַּאֲשֶׁר־רָאִ֥יתִי לְצ֖וֹר שְׁתוּלָ֣ה בְנָוֶ֑ה וְאֶפְרַ֕יִם לְהוֹצִ֥יא אֶל־הֹרֵ֖ג בָּנָֽיו׃ 13
೧೩ತೂರು ಹೇಗೆ ಕಾಣಿಸುತ್ತದೋ ಹಾಗೆಯೇ ಎಫ್ರಾಯೀಮು ಹುಲ್ಗಾವಲಿನಲ್ಲಿ ನೆಟ್ಟಿರುವುದಾಗಿ ಕಾಣಿಸುತ್ತದೆ; ಆದರೆ ಎಫ್ರಾಯೀಮು ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.
תֵּן־לָהֶ֥ם יְהוָ֖ה מַה־תִּתֵּ֑ן תֵּן־לָהֶם֙ רֶ֣חֶם מַשְׁכִּ֔יל וְשָׁדַ֖יִם צֹמְקִֽים׃ 14
೧೪ಯೆಹೋವನೇ, ಅವರಿಗೆ ತಕ್ಕ ಗತಿಯನ್ನು ವಿಧಿಸು; ಏನು ವಿಧಿಸುತ್ತೀಯೋ? ಅವರಿಗೆ ಗರ್ಭಸ್ರಾವವನ್ನು ಮಾಡು, ಮೊಲೆಯನ್ನು ಬತ್ತಿಸು.
כָּל־רָעָתָ֤ם בַּגִּלְגָּל֙ כִּֽי־שָׁ֣ם שְׂנֵאתִ֔ים עַ֚ל רֹ֣עַ מַֽעַלְלֵיהֶ֔ם מִבֵּיתִ֖י אֲגָרְשֵׁ֑ם לֹ֤א אוֹסֵף֙ אַהֲבָתָ֔ם כָּל־שָׂרֵיהֶ֖ם סֹרְרִֽים׃ 15
೧೫ಅವರ ದುಷ್ಟತನವು ಗಿಲ್ಗಾಲಿನಲ್ಲಿ ತುಂಬಿದೆ; ಅಲ್ಲೇ ನನ್ನ ದ್ವೇಷಕ್ಕೆ ಗುರಿಯಾಗಿದ್ದಾರೆ; ಅವರ ದುಷ್ಕೃತ್ಯಗಳ ನಿಮಿತ್ತ ನಾನು ಅವರನ್ನು ನನ್ನ ನಿವಾಸದೊಳಗಿಂದ ಓಡಿಸಿಬಿಡುವೆನು; ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲರೂ ದ್ರೋಹಿಗಳೇ ಸರಿ.
הֻכָּ֣ה אֶפְרַ֔יִם שָׁרְשָׁ֥ם יָבֵ֖שׁ פְּרִ֣י בלי ־יַעֲשׂ֑וּן גַּ֚ם כִּ֣י יֵֽלֵד֔וּן וְהֵמַתִּ֖י מַחֲמַדֵּ֥י בִטְנָֽם׃ ס 16
೧೬ಎಫ್ರಾಯೀಮ್ಯರಿಗೆ ಘಾತವಾಗಿದೆ; ಅವರ ವಂಶಮೂಲವು ಒಣಗಿಹೋಗಿದೆ. ಅವರು ಫಲಹೀನರಾಗುವರು; ಹೌದು, ಅವರು ಮಕ್ಕಳನ್ನು ಹೆತ್ತರೂ ಅವರ ಗರ್ಭದ ಪ್ರಿಯಫಲವನ್ನು ಸಾಯಿಸುವೆನು.
יִמְאָסֵ֣ם אֱלֹהַ֔י כִּ֛י לֹ֥א שָׁמְע֖וּ ל֑וֹ וְיִהְי֥וּ נֹדְדִ֖ים בַּגּוֹיִֽם׃ ס 17
೧೭ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನ ಮಾತಿಗೆ ಕಿವಿಗೊಡಲಿಲ್ಲ; ಅವರಿಗೆ ಜನಾಂಗಗಳಲ್ಲಿ ಅಲೆದಾಡುವ ಗತಿಯಾಗುವುದು.

< הוֹשֵׁעַ 9 >