< ヨハネの福音書 18 >

1 イエスはこれらのことを話し終えられると、弟子たちとともに、ケデロンの川筋の向こう側に出て行かれた。そこに園があって、イエスは弟子たちといっしょに、そこにはいられた。
ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.
2 ところで、イエスを裏切ろうとしていたユダもその場所を知っていた。イエスがたびたび弟子たちとそこで会合されたからである。
ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.
3 そこで、ユダは一隊の兵士と、祭司長、パリサイ人たちから送られた役人たちを引き連れて、ともしびとたいまつと武器を持って、そこに来た。
ಹೀಗಿರಲಾಗಿ ಯೂದನು ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಸೈನಿಕರ ಗುಂಪನ್ನೂ, ಕಾವಲಾಳುಗಳನ್ನೂ ಕರೆದುಕೊಂಡು ದೀಪಗಳನ್ನೂ, ಪಂಜುಗಳನ್ನೂ ಮತ್ತು ಆಯುಧಗಳನ್ನೂ ಹಿಡಿದುಕೊಂಡು ಅಲ್ಲಿಗೆ ಬಂದನು.
4 イエスは自分の身に起ころうとするすべてのことを知っておられたので、出て来て、「だれを捜すのか。」と彼らに言われた。
ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು.
5 彼らは、「ナザレ人イエスを。」と答えた。イエスは彼らに「それはわたしです。」と言われた。イエスを裏切ろうとしていたユダも彼らといっしょに立っていた。
ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.
6 イエスが彼らに、「それはわたしです。」と言われたとき、彼らはあとずさりし、そして地に倒れた。
ಆತನು ಅವರಿಗೆ “ನಾನೇ ಆತನು” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.
7 そこで、イエスがもう一度、「だれを捜すのか。」と問われると、彼らは「ナザレ人イエスを。」と言った。
ಆಗ ಆತನು ಪುನಃ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು ಹುಡುಕುತ್ತೇವೆ” ಎಂದರು.
8 イエスは答えられた。「それはわたしだと、あなたがたに言ったでしょう。もしわたしを捜しているのなら、この人たちはこのままで去らせなさい。」
ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ. ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಹೋಗಲುಬಿಡಿರಿ” ಎಂದನು.
9 それは、「あなたがわたしに下さった者のうち、ただのひとりをも失いませんでした。」とイエスが言われたことばが実現するためであった。
ಹೀಗೆ “ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳೆದುಕೊಳ್ಳಲಿಲ್ಲ” ಎಂದು ತಾನೇ ಹೇಳಿದ ಮಾತು ನೆರವೇರಿತು.
10 シモン・ペテロは、剣を持っていたが、それを抜き、大祭司のしもべを撃ち、右の耳を切り落とした。そのしもべの名はマルコスであった。
೧೦ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು.
11 そこで、イエスはペテロに言われた。「剣をさやに収めなさい。父がわたしに下さった杯を、どうして飲まずにいられよう。」
೧೧ಆಗ ಯೇಸು ಪೇತ್ರನಿಗೆ, “ಕತ್ತಿಯನ್ನುಒರೆಯಲ್ಲಿ ಹಾಕು. ತಂದೆಯು ನನಗೆ ಕೊಟ್ಟಿರುವ ಪಾತ್ರೆಯಲ್ಲಿ ನಾನು ಕುಡಿಯಬಾರದೋ?” ಎಂದು ಹೇಳಿದನು.
12 そこで、一隊の兵士と千人隊長、それにユダヤ人から送られた役人たちは、イエスを捕えて縛り、
೧೨ಆಮೇಲೆ ಆ ಸೈನಿಕರ ಗುಂಪು ಮತ್ತು ಸಹಸ್ರಾಧಿಪತಿಯೂ, ಯೆಹೂದ್ಯರ ಓಲೇಕಾರರೂ ಯೇಸುವನ್ನು ಹಿಡಿದು ಕಟ್ಟಿದರು.
13 まずアンナスのところに連れて行った。彼がその年の大祭司カヤパのしゅうとだったからである。
೧೩ಆತನನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.
14 カヤパは、ひとりの人が民に代わって死ぬことが得策である、とユダヤ人に助言した人である。
೧೪ಆ ಕಾಯಫನೇ, ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟವನು.
15 シモン・ペテロともうひとりの弟子は、イエスについて行った。この弟子は大祭司の知り合いで、イエスといっしょに大祭司の中庭にはいった。
೧೫ಸೀಮೋನ್ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನಿಗೆ ಮಹಾಯಾಜಕನ ಪರಿಚಯವಿದ್ದುದರಿಂದ ಯೇಸುವಿನ ಜೊತೆ ಮಹಾಯಾಜಕನ ಅಂಗಳದೊಳಗೆ ಹೋದನು.
16 しかし、ペテロは外で門のところに立っていた。それで、大祭司の知り合いである、もうひとりの弟子が出て来て、門番の女に話して、ペテロを連れてはいった。
೧೬ಆದರೆ ಪೇತ್ರನು ಹೊರಗೆ ಬಾಗಿಲಿನ ಬಳಿಯಲ್ಲಿ ನಿಂತಿದ್ದನು. ಮಹಾಯಾಜಕನ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.
17 すると、門番のはしためがペテロに、「あなたもあの人の弟子ではないでしょうね。」と言った。ペテロは、「そんな者ではない。」と言った。
೧೭ಆಗ ದ್ವಾರಪಾಲಕಿಯು, “ನೀನು ಸಹ ಆ ಮನುಷ್ಯನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಪೇತ್ರನನ್ನು ಕೇಳಲು, ಅವನು, “ನಾನಲ್ಲ” ಎಂದನು.
18 寒かったので、しもべたちや役人たちは、炭火をおこし、そこに立って暖まっていた。ペテロも彼らといっしょに、立って暖まっていた。
೧೮ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು.
19 そこで、大祭司はイエスに、弟子たちのこと、また、教えのことについて尋問した。
೧೯ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಆತನ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.
20 イエスは彼に答えられた。「わたしは世に向かって公然と話しました。わたしはユダヤ人がみな集まって来る会堂や宮で、いつも教えたのです。隠れて話したことは何もありません。
೨೦ಅದಕ್ಕೆ ಯೇಸು, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.
21 なぜ、あなたはわたしに尋ねるのですか。わたしが人々に何を話したかは、わたしから聞いた人たちに尋ねなさい。彼らならわたしが話した事がらを知っています。」
೨೧ನೀನು ನನ್ನನ್ನು ಯಾಕೆ ವಿಚಾರಿಸುತ್ತೀ? ನಾನು ಏನೇನು ಮಾತನಾಡಿದೆನೋ ಅದನ್ನು ಕೇಳಿದವರನ್ನೇ ವಿಚಾರಿಸು. ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ” ಎಂದು ಉತ್ತರಕೊಟ್ಟನು.
22 イエスがこう言われたとき、そばに立っていた役人のひとりが、「大祭司にそのような答え方をするのか。」と言って、平手でイエスを打った。
೨೨ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.
23 イエスは彼に答えられた。「もしわたしの言ったことが悪いなら、その悪い証拠を示しなさい。しかし、もし正しいなら、なぜ、わたしを打つのか。」
೨೩ಯೇಸು ಅವನಿಗೆ “ನಾನು ಏನಾದರೂ ತಪ್ಪನ್ನು ಮಾತನಾಡಿದ್ದರೆ, ಆ ತಪ್ಪಿನ ವಿಷಯವಾಗಿ ಸಾಕ್ಷಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದು ಕೇಳಿದನು.
24 アンナスはイエスを、縛ったままで大祭司カヤパのところに送った。
೨೪ಆಗ ಅನ್ನನು ಆತನನ್ನು ಇನ್ನೂ ಕಟ್ಟಿರಲಾಗಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.
25 一方、シモン・ペテロは立って、暖まっていた。すると、人々は彼に言った。「あなたもあの人の弟子ではないでしょうね。」ペテロは否定して、「そんな者ではない。」と言った。
೨೫ಇತ್ತ, ಸೀಮೋನ್ ಪೇತ್ರನು ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಾ ಇದ್ದನು. ಆಗ ಅಲ್ಲಿದ್ದವರು ಅವನನ್ನು, “ನೀನು ಸಹ ಆತನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅವನು ಅದನ್ನು ನಿರಾಕರಿಸಿ, “ನಾನಲ್ಲ” ಎಂದನು.
26 大祭司のしもべのひとりで、ペテロに耳を切り落とされた人の親類に当たる者が言った。「私が見なかったとでもいうのですか。あなたは園であの人といっしょにいました。」
೨೬ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?” ಎಂದನು.
27 それで、ペテロはもう一度否定した。するとすぐ鶏が鳴いた。
೨೭ಅದಕ್ಕೆ ಪೇತ್ರನು ಪುನಃ ನಿರಾಕರಿಸಿ “ನಾನಲ್ಲ” ಎಂದನು. ಆಗ ಕೂಡಲೇ ಕೋಳಿ ಕೂಗಿತು.
28 さて、彼らはイエスを、カヤパのところから総督官邸に連れて行った。時は明け方であった。彼らは、過越の食事が食べられなくなることのないように、汚れを受けまいとして、官邸にはいらなかった。
೨೮ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.
29 そこで、ピラトは彼らのところに出て来て言った。「あなたがたは、この人に対して何を告発するのですか。」
೨೯ಹೀಗಿರಲಾಗಿ ಪಿಲಾತನು ಹೊರಗೆ ಅವರ ಬಳಿಗೆ ಬಂದು, “ಈ ಮನುಷ್ಯನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದನು.
30 彼らはピラトに答えた。「もしこの人が悪いことをしていなかったら、私たちはこの人をあなたに引き渡しはしなかったでしょう。」
೩೦ಯೆಹೂದ್ಯರು ಅವನಿಗೆ, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿ ಕೊಡುತ್ತಿರಲಿಲ್ಲ” ಎಂದು ಉತ್ತರಕೊಟ್ಟರು.
31 そこでピラトは彼らに言った。「あなたがたがこの人を引き取り、自分たちの律法に従ってさばきなさい。」ユダヤ人たちは彼に言った。「私たちには、だれを死刑にすることも許されてはいません。」
೩೧ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡು ಹೋಗಿ ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಆತನಿಗೆ ತೀರ್ಪು ಮಾಡಿರಿ” ಎಂದು ಹೇಳಿದನು. ಅದಕ್ಕೆ ಯೆಹೂದ್ಯರು, “ಮರಣ ದಂಡನೆಯನ್ನು ವಿಧಿಸುವ ಅಧಿಕಾರವು ನಮಗೆ ಇಲ್ಲ” ಎಂದರು.
32 これは、ご自分がどのような死に方をされるのかを示して話されたイエスのことばが成就するためであった。
೩೨ಇದರಿಂದ ಯೇಸು ತಾನು ಎಂಥಾ ಮರಣವನ್ನು ಹೊಂದುವನೆಂದು ಸೂಚಿಸಿ ಹೇಳಿದ ಮಾತು ನೆರವೇರಿತು.
33 そこで、ピラトはもう一度官邸にはいって、イエスを呼んで言った。「あなたは、ユダヤ人の王ですか。」
೩೩ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.
34 イエスは答えられた。「あなたは、自分でそのことを言っているのですか。それともほかの人が、あなたにわたしのことを話したのですか。」
೩೪ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು.
35 ピラトは答えた。「私はユダヤ人ではないでしょう。あなたの同国人と祭司長たちが、あなたを私に引き渡したのです。あなたは何をしたのですか。」
೩೫ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ, ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದ್ದಕ್ಕೆ,
36 イエスは答えられた。「わたしの国はこの世のものではありません。もしこの世のものであったなら、わたしのしもべたちが、わたしをユダヤ人に渡さないように、戦ったことでしょう。しかし、事実、わたしの国はこの世のものではありません。」
೩೬ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.
37 そこでピラトはイエスに言った。「それでは、あなたは王なのですか。」イエスは答えられた。「わたしが王であることは、あなたが言うとおりです。わたしは、真理のあかしをするために生まれ、このことのために世に来たのです。真理に属する者はみな、わたしの声に聞き従います。」
೩೭ಅದಕ್ಕೆ ಪಿಲಾತನು, “ಹಾಗಾದರೆ ನೀನು ಅರಸನೋ?” ಎಂದನು. ಯೇಸು, “ನನ್ನನ್ನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯದ ವಿಷಯದಲ್ಲಿ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿದವನು, ಇದಕ್ಕಾಗಿಯೇ ಲೋಕಕ್ಕೆ ಬಂದಿದ್ದೇನೆ. ಸತ್ಯಕ್ಕೆ ಸೇರಿದ ಪ್ರತಿಯೊಬ್ಬನು ನನ್ನ ಸ್ವರವನ್ನು ಕೇಳುತ್ತಾನೆ” ಎಂದು ಉತ್ತರಕೊಟ್ಟನು.
38 ピラトはイエスに言った。「真理とは何ですか。」 彼はこう言ってから、またユダヤ人たちのところに出て行って、彼らに言った。「私は、あの人には罪を認めません。
೩೮ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.
39 しかし、過越の祭りに、私があなたがたのためにひとりの者を釈放するのがならわしになっています。それで、あなたがたのために、ユダヤ人の王を釈放することにしましょうか。」
೩೯ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು.
40 すると彼らはみな、また大声をあげて、「この人ではない。バラバだ。」と言った。このバラバは強盗であった。
೪೦ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.

< ヨハネの福音書 18 >