< ಸಮುವೇಲನು - ಪ್ರಥಮ ಭಾಗ 10 >

1 ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
Ndipo Samweli akachukua chupa ya mafuta, akayamimina juu ya kichwa cha Sauli, na akambusu. Akasema, “Je, Mungu hajakutia mafuta uwe mtawala juu ya urithi wake?
2 ಈ ಹೊತ್ತು ನೀನು ನನ್ನನ್ನು ಬಿಟ್ಟುಹೋದ ನಂತರ ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಹೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ಮನುಷ್ಯರನ್ನು ಕಾಣುವಿ. ಅವರು ನಿನಗೆ, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆಯು ಕತ್ತೆಗಳ ಚಿಂತೆಬಿಟ್ಟು ನನ್ನ ಮಗನು ಎಲ್ಲಿ ಹೋದನು ಎಂಬುದಾಗಿ ನಿನಗೋಸ್ಕರ ಹಂಬಲಿಸುತ್ತಿರುತ್ತಾನೆ’ ಎಂದು ಹೇಳುವರು.
Utakapoondoka kwangu leo, utawaona wanaume wawili na kaburi la Raheli, katika nchi ya Benyamini hapo Selsa. Watu hao watakuambia, 'Wale punda mliokuwa mkiwatafuta wamepatikana. Sasa, Baba yako ameacha kuwatunza punda, na ana hofu juu yenu, anasema, “Nitafanya nini kuhusu mwanangu?”
3 ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್‌ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.
Kisha utakwenda mbele kutoka hapo, na utafika katika mwaloni wa Tabori. Utakutana na watu watatu hapo wakienda kwa Mungu huko Betheli, mmoja akibeba wana-mbuzi watatu, mwingine akibeba mikate mitatu, na mwingine akibeba kiriba cha divai.
4 ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.
Watawasalimu na watawapatia mikate miwili, kutoka mikononi mwao.
5 ಅಲ್ಲಿಂದ ಫಿಲಿಷ್ಟಿಯರ ದಂಡು ಇರುವ ದೇವಗಿರಿಯನ್ನು ಮುಟ್ಟಿದಾಗ ಮುಂಭಾಗದಲ್ಲಿ ಸ್ವರಮಂಡಲ, ದಮ್ಮಡಿ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದ ಇಳಿದು ಬರುತ್ತಿರುವ ಪ್ರವಾದಿಗಳ ಸಮೂಹವನ್ನು ಕಾಣುವಿ. ಅವರು ಪರವಶರಾಗಿ ಪ್ರವಾದಿಸುವರು.
Baada ya hayo, utafika katika mlima wa Mungu, mahali ilipo ngome ya Wafilisti. Utakapofika mjini, utakutana na kundi la manabii wakiteremka chini kutoka mahali pa juu wakiwa na kinanda, tari, kinubi na filimbi mbele yao; na watakuwa wakitabiri.
6 ಆಗ ಯೆಹೋವನ ಆತ್ಮವು ನಿನ್ನ ಮೇಲೆಯೂ ಬರುವುದರಿಂದ ನೀನೂ ಅವರೊಂದಿಗೆ ಪ್ರವಾದಿಸುವಿ. ನೀನು ಮಾರ್ಪಟ್ಟ ಮನುಷ್ಯನಾಗುವಿ.
Roho ya BWANA itakujaza, nawe utatabiri pamoja nao, na utabadilishwa na kuwa mtu tofauti.
7 ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ಮಾಡು; ದೇವರು ನಿನ್ನ ಸಂಗಡ ಇದ್ದಾನೆ.
Basi, ishara hizi zikikufikia, fanya lolote ambalo mikono yako itaona ifanye, kwa sababu Mungu yu pamoja nawe.
8 ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿನಗಳಾದ ನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವುದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯ ವರೆಗೆ ಕಾದುಕೊಂಡಿರು” ಎಂದು ಹೇಳಿದನು.
Nenda ushuke mbele yangu hadi Gilgali. Kisha nitakufuata huko nitoe dhabihu za kuteketezwa na kutoa dhabihu za amani. Nisubiri kwa muda wa siku saba hadi nije kwako na nikuoneshe unachopaswa kufanya.”
9 ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಹೃದಯವನ್ನು ಕೊಟ್ಟನು. ಅದೇ ದಿನದಲ್ಲಿ ಆ ಎಲ್ಲಾ ಗುರುತುಗಳು ಸಂಭವಿಸಿದವು.
Sauli alipotega mgongo amuache Samweli, Mungu akampa moyo mwingine. Ndipo ishara zote hizi zikatimia siku hiyo.
10 ೧೦ ಅವನು ದೇವಗಿರಿಗೆ ಬಂದ ಕೂಡಲೆ ಪರವಶವಾದ ಪ್ರವಾದಿಸಮೂಹವು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮವು ಸೌಲನ ಮೇಲೆ ಬಂದ್ದದರಿಂದ ಅವನೂ ಪರವಶನಾಗಿ ಅವರೊಂದಿಗೆ ಸೇರಿ ಪ್ರವಾದಿಸಿದನು.
Walipofika mlimani, kundi la manabii lilikutana naye, na Roho ya Mungu ikamjilia kwa nguvu ili atabiri pamoja nao.
11 ೧೧ ಅವನು ಪರವಶನಾಗಿ ಮಾತನಾಡುವುದನ್ನು ಅವನ ಪರಿಚಿತರು ಕಂಡು ತಮ್ಮ ತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೋ?” ಎಂದು ಮಾತನಾಡಿಕೊಳ್ಳುತ್ತಿದ್ದರು.
Kila mtu aliyemfahamu kabla hajamwona akitabiri pamoja na manabii, watu waliambizana wao kwa wao:”Kitu gani kimempata mtoto wa Kishi? Hivi Sauli ni mmoja wa manabii siku hizi?”
12 ೧೨ ಆಗ ಆ ಸ್ಥಳದವನೊಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಸಂಗತಿಯಿಂದ “ಸೌಲನು ಪ್ರವಾದಿಗಳಲ್ಲಿದ್ದಾನೆ” ಎಂಬ ವಿಷಯ ಹುಟ್ಟಿತು.
Mtu mmoja kutoka eneo hilo akajibu, “Na ni nani baba yao?” Kwa sababu ya jambo hili, ukawapo msemo, “Hivi Sauli naye ni mmoja wa manabii?”
13 ೧೩ ಅವನು ಪ್ರವಾದಿಸಿದ ನಂತರ ಬೆಟ್ಟದ ಮೇಲಿದ್ದ ಯಜ್ಞವೇದಿಯ ಬಳಿಗೆ ಬಂದನು.
Alipomaliza kutabiri, akafika mahali pa juu.
14 ೧೪ ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಲು ಅವನು, “ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲವಾದ್ದರಿಂದ ಸಮುವೇಲನ ಬಳಿಗೆ ಹೋದೆವು” ಅಂದನು.
Ndipo baba yake mdogo na akamuuliza Sauli na mtumishi wake, “Mlienda wapi?” Naye akamjibu, “Kuwatafuta punnda; tulipoona kwamba hatuwezi kuwapata, tukaenda kwa Samweli.”
15 ೧೫ “ಸಮುವೇಲನು ಏನು ಹೇಳಿದನು?” ಎಂದು ಚಿಕ್ಕಪ್ಪನು ಕೇಳಲು
Baba yake mdogo akasema, “Tafadhali niambie kile alichosema kwako Samweli,”
16 ೧೬ ಸೌಲನು, “ಕತ್ತೆಗಳು ಸಿಕ್ಕಿವೇ ಎಂದು ತಿಳಿಸಿದನು” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.
Sauli akamjibu baba yake mdogo, “Alituambia waziwazi kwamba punda wamepatikana.” Lakini kuhusu swala la ufalme alilosema Samweli hakumwambia.
17 ೧೭ ಸಮುವೇಲನು ಇಸ್ರಾಯೇಲ್ಯರನ್ನು ಮಿಚ್ಪೆಗೆ ಕರೆಯಿಸಿ ಯೆಹೋವನ ಸನ್ನಿಧಿಯಲ್ಲಿ ಸೇರಿಸಿಕೊಂಡನು.
Basi Samweli aliwaita watu pamoja huko Mispa.
18 ೧೮ ಆತನು ಅವರಿಗೆ, ಇಸ್ರಾಯೇಲ್‌ ದೇವರಾದ ಯೆಹೋವನು ಹೇಳುವುದನ್ನು ಕೇಳಿರಿ, “ನೀವು ಐಗುಪ್ತರ ಕೈಗೆ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನೂ, ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನೂ ನಾನೇ.
Akwaambia watu wa Israeli, “Hivi ndivyo BWANA, Mungu wa Israeli asemavyo: 'Niliwatoa Israeli kutoka Misri, na niliwaokoa kutoka nchi ya Wamisri, na kutoka mkono wa falme zote zilizowaonea.'
19 ೧೯ ನೀವಾದರೋ ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ಈಗ ತಿರಸ್ಕರಿಸಿ, ನಮಗೊಬ್ಬ ಅರಸನನ್ನು ನೇಮಿಸೆಂದು ಹೇಳುತ್ತೀರಿ ಅನ್ನುತ್ತಾನೆ. ಆದುದರಿಂದ ನೀವು ಕುಲ ಕುಲವಾಗಿಯೂ ಗೋತ್ರಗೋತ್ರವಾಗಿಯೂ ಯೆಹೋವನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಿರಿ” ಎಂದು ಅಪ್ಪಣೆ ಮಾಡಿದನು.
Lakini leo mmemkataa Mungu wenu, awaokoaye kutoka kwenye majanga na mahangaiko; na mmemwambia, ' Tuwekee mfalme juu yetu; Sasa jihudhurisheni wenyewe mbele za BWANA kwa kabila na jamaa zenu.”
20 ೨೦ ಸಮುವೇಲನು ಇಸ್ರಾಯೇಲ್ಯರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟುಬಿದ್ದಿತು.
Kisha Samweli akawaleta kabila zote za Isareli karibu, na kulichagua kabila la Benyamini.
21 ೨೧ ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟುಬಿದ್ದಿತು. ಆದರೆ ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.
Akawasogeza karibu kabila la Benyamini kwa kufuata jamaa zao; na jamaa ya Wamatri ikachaguliwa; na Sauli mwana wa Kishi akachaguliwa. Lakini walipokwenda kumtafuta, hakuweza kuonekana.
22 ೨೨ ಅವರು, “ಆ ಮನುಷ್ಯನು ಇಲ್ಲಿಗೆ ಬರುವನೋ” ಎಂದು ಯೆಹೋವನನ್ನು ವಿಚಾರಿಸಿದಾಗ ಆತನು, “ಬಂದಿದ್ದಾನೆ; ಇಗೋ, ಸಾಮಾನುಗಳ ಮಧ್ಯದಲ್ಲಿ ಅಡಗಿಕೊಂಡಿದ್ದಾನೆ” ಎಂದು ಉತ್ತರಕೊಟ್ಟನು.
Kisha watu walitaka kumuuliza Mungu maswali zaidi, “Bado yupo mtu mwingine ajaye?” BWANA akajibu, “Yeye mwenyewe kajificha kwenye mizigo.”
23 ೨೩ ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯದಲ್ಲಿ ನಿಲ್ಲಿಸಿದರು. ಗುಂಪಿನಲ್ಲಿದ್ದ ಎಲ್ಲಾ ಜನರಿಗಿಂತ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರವಾದ ಪುರುಷನಾಗಿದ್ದನು.
Wakaenda mbio na kumleta Sauli kutoka humo. Aliposimama kati yao, alikuwa mrefu kuliko watu wote kuanzia mabega yake kwenda juu.
24 ೨೪ ಆಗ ಸಮುವೇಲನು ಎಲ್ಲಾ ಜನರಿಗೆ, “ನೋಡಿದಿರಾ, ಯೆಹೋವನಿಂದ ಆರಿಸಲ್ಪಟ್ಟವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ” ಎನ್ನಲು ಜನರೆಲ್ಲರೂ, “ಅರಸನು ಚಿರಂಜೀವಿಯಾಗಿರಲಿ” ಎಂದು ಘೋಷಣೆಗಳನ್ನು ಕೂಗಿದರು.
Kisha Samweli akawaambia watu, “Je, mnamuona mtu ambaye BWANA amemchagua? Hakuna mtu kama yeye kati ya watu wote.” Watu wote wakapiga Kelele, “Mfalme na aishi”
25 ೨೫ ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಯೆಹೋವನ ಸನ್ನಿಧಿಯಲ್ಲಿಟ್ಟನು. ಆ ಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.
Ndipo Samweli akawaambia watu desturi na sheria za ufalme, akaziandika katika kitabu, na kuziweke mbele za BWANA. Baadaye Samweli akawaruhusu watu waondoke kila mtu aende nyumbani kwake.
26 ೨೬ ಸೌಲನೂ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು; ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲಿ ಹೋದರು.
Sauli pia alienda nyumbani kwake huko Gibea, akiwa na baadhi ya watu wenye nguvu, wenye mioyo iliyoguswa na Mungu.
27 ೨೭ ಕೆಲವು ಮಂದಿ ಅಯೋಗ್ಯರು, “ಇವನು ನಮ್ಮನ್ನು ರಕ್ಷಿಸುವನೋ?” ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.
Lakini baadhi ya watu wasiofaa walisema, “Huyu mtu atatuokoaje?” Watu hawa walimdharau Sauli na hawakumletea zawadi zozote. Lakini Sauli alinyamaza kimya.

< ಸಮುವೇಲನು - ಪ್ರಥಮ ಭಾಗ 10 >