< ಅಪೊಸ್ತಲರ ಕೃತ್ಯಗಳ 8 >

1 ಸೌಲನಿಗೆ ಅವನ ಕೊಲೆಗೆ ಸಮ್ಮತಿಸಿದನು. ಆ ದಿನದಲ್ಲಿ ಯೆರೂಸಲೇಮಿನಲ್ಲಿದ್ದ ಸಭೆಗೆ ದೊಡ್ಡ ಹಿಂಸೆ ಉಂಟಾಯಿತು. ಅಪೊಸ್ತಲರು ಹೊರತಾಗಿ ಎಲ್ಲರೂ ಯೂದಾಯ, ಸಮಾರ್ಯ ಸೀಮೆಗಳಿಗೆ ಚದರಿಹೋದರು.
Bulus ciya kange buwero. Kikwamacho dotange chilendo kwenu dor nob kwama miro wursalima, di la nubo nebilenkertiyeu ciin yalam gwamm mor bitine Yahudiya kange samariya, cii dob ka nob tomangeb.
2 ಭಕ್ತರಾದ ಜನರು ಸ್ತೆಫನನ ದೇಹವನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.
Nabarubbo kibilenke chin furum Stephen laciyi yim kang buwam dorcer.
3 ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.
Di la Sawulu ma nob kwamabo nen diker kambo ken chiti doi luwe-luwe chi cikangum nabarobboti kange natubo, kumcitak furcina.
4 ಚದರಿಹೋದವರು ಅಲ್ಲಲ್ಲಿ ಹೋಗಿ ಸುವಾರ್ತೆಯನ್ನು ಸಾರುತ್ತಿದ್ದರು.
Duwa nubo neken bilenke birombo yalamem, chinen ya chine ker kwamaro.
5 ಫಿಲಿಪ್ಪನು ಸಮಾರ್ಯವೆಂಬ ಪಟ್ಟಣಕ್ಕೆ ಹೋಗಿ ಕ್ರಿಸ್ತನ ವಿಷಯವಾಗಿ ಅಲ್ಲಿರುವವರಿಗೆ ಪ್ರಚುರಪಡಿಸಿದನು.
Filibus yaken firen Samariya toker Yesuroti.
6 ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.
Kambo nubo nuwa lacitoten dikero Filibus matiyeri, lachin yilaken ki ner chero gwam na nuwau dike chitoktiyeu.
7 ಏಕೆಂದರೆ ಅನೇಕರೊಳಗಿಂದ ದೆವ್ವಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಮತ್ತು ಅನೇಕ ಪಾರ್ಶ್ವವಾಯು ರೋಗಿಗಳೂ ವಿಕಲಾಂಗರು ಸ್ವಸ್ಥರಾದರು.
Won kelkeliyo bwirko chiranyu bwinubo ducce no nuweceu chin ciwiyeti kidir nubowo kwamang be kange kilentinimbo fiya twaka.
8 ಆ ಪಟ್ಟಣದಲ್ಲಿ ಬಹು ಸಂತೋಷವುಂಟಾಯಿತು.
La chin ma fuwor nerer ducce bitinecho.
9 ಆದರೆ ಕೆಲವು ಕಾಲದಿಂದ ಆ ಪಟ್ಟಣದಲ್ಲಿದ್ದ ಸೀಮೋನನೆಂಬ ಒಬ್ಬ ಮನುಷ್ಯನು ತಾನು ಏನೋ ಒಬ್ಬ ಮಹಾತ್ಮನೆಂದು ಹೇಳಿಕೊಂಡು ಮಂತ್ರತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರಗನ್ನು ಹುಟ್ಟಿಸುತ್ತಿದ್ದನು.
Nii kange wi bitinecho choti ki Siman. wo kikabe chin nikuye latakri chima nubo Samariyamin diker nyimanti nawo chi cho dorceriti ki chin diro kange.
10 ೧೦ ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು.
Kwrub Samariya nubo dur kange bibei nuwa choti cikinyi ki “Niwo cho bikwan duret kwamaro wocii choti ki dureu.
11 ೧೧ ಬಹುಕಾಲದಿಂದಲೂ ಅವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಕಿವಿಗೊಡುತ್ತಿದ್ದರು.
Chi nuwa choti wori kutangnyi machinen diker nyimankati ki kwomje- kwomjece.
12 ೧೨ ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
La kambo chi ne bilenke kange ker waber Filibus ceri, wo chi mati ker liya kwama kiden Yesu kriti lachin yuchinen mwem kwamambo gwamce nabarub kange natub.
13 ೧೩ ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.
Cho siman kibwicho ne bilenke kambo ciyu cinen mwem kwamamberi la chin mwerkang kange Filibus kambo chito cii ma diker nyimanka ti kange nanyendo dureri, la kwomchoti.
14 ೧೪ ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ, ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು.
kambo nob tomangeb wursalima nuwa fulende samariyau yo kerkwamareri cii tuncinen Bitrus kange Yahaya.
15 ೧೫ ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.
kacilauweri, ciin kwobcinen dilo naci yo yuwatangbe kwamako.
16 ೧೬ ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು
Wori bwiri yuwatangbe kwamako yiraubo dorcher bwiri, chin yucinen ka mwem kwamambo kiden Tee kwama Yesu.
17 ೧೭ ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮವರವನ್ನು ಹೊಂದಿದರು.
La Bitrus kange Yahaya cin yo cinenten kanceu dorcer lachin yo yuwa tangbe kwama.
18 ೧೮ ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು,
Kambo siman to cii yuwatangbe kwama koti kiyeka kange nob tomangeb dorcerdi lanne chi kyemer.
19 ೧೯ “ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮವರವನ್ನು ಹೊಂದುವಂತೆ ಈ ಅಧಿಕಾರವನ್ನು ನನಗೂ ಕೊಡಿರಿ” ಅಂದನು.
Yici, ki “kom neye bikwandowo ken, lawo niwo miyo yo cinenti kanko dorcerei na yo yuwatangbe kwamako.
20 ೨೦ ಆದರೆ ಪೇತ್ರನು ಅವನಿಗೆ, “ನಿನ್ನ ಬೆಳ್ಳಿಯು ನಿನ್ನ ಕೂಡ ಹಾಳಾಗಿಹೋಗಲಿ. ದೇವರ ವರವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಭಾವಿಸುತ್ತೀಯೋ?
Di la Bitrus yicho ki, nawori mweu a yanchang kange mwo. wori muti kwain mwan fiya yuwatangbe kwamake ki chuweka mwek.
21 ೨೧ ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಯಾವ ಪಾಲೂ ಇಲ್ಲ; ಏಕೆಂದರೆ ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ.
Mu manki chuner fou dikero wuronen, wori mor nere mweu kebo dong-dong kwama nen.
22 ೨೨ ಆದುದರಿಂದ ಈ ನಿನ್ನ ಕೆಟ್ಟತನವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೋ ಕರ್ತನು ನಿನ್ನ ಮನಸ್ಸಿನ ಆಲೋಚನೆಯನ್ನು ಕ್ಷಮಿಸುವನೋ ಏನೋ ಆತನನ್ನು ಬೇಡಿಕೋ.
Nyori ywelum bwirang ker mwero, di la kwob dilo kwama nen kangeri an dob mwen bwirang ker mwero muyo ner mwereu.
23 ೨೩ ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು
Wori min nyimom mumor kanka nerek tak ri, mor bwaka nerek.
24 ೨೪ ಅದಕ್ಕೆ ಸೀಮೋನನು, “ನೀವು ಹೇಳಿರುವ ಸಂಗತಿಗಳಲ್ಲಿ ಯಾವುದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ಕರ್ತನನ್ನು ಬೇಡಿಕೊಳ್ಳಿರಿ” ಎಂದು ಹೇಳಿದನು.
Siman ciya yiki “kwobka dilo kwama nen kermir, dike kange mor dikerwo mtokeu, a abwire kange mwo.
25 ೨೫ ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.
Kambo Bitrus kange cidim ne kaker kwamareri, chin yilaken wursalima, ciyakenti dor nurer di, cin wab ker kwamaro chinar lor Samariya ducce.
26 ೨೬ ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣದ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ” ಎಂದು ಹೇಳಿದನು.
naweu bwe tomange kwama yi Filibus ker ki Kweri yaken chunyako bang nure yirau tob kange wursalima yaken Gaza (Nure wo ki no kwechane.
27 ೨೭ ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.
Kweri yaken nikange wo ciro Abaca, in Liyar dur Chunya kandu katu, liya Abaca. cho cima liyar kulen choro tiye gwamme Bou wursalima cama wabkerwi.
28 ೨೮ ಅವನು ದೇವಾರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.
Yikenti yimyie diker yamercer kiye, bifumer Ishaya niker dukumer.
29 ೨೯ ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.
Yuwatangbe ko yi Filibus ki “yaten bidom kange kulend kwikarowo”.
30 ೩೦ ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಓದುತ್ತಿರುವುದನ್ನು ಕೇಳಿ, “ಎಲೈ, ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು.
Filibus cwa yanfiyacho nuwa ci kiye bifumer Ishaya ne ker dukkumerti la ciki mum nyimom dike me kiyetiyeu?”
31 ೩೧ ಅದಕ್ಕೆ ಅವನು, “ಯಾರಾದರೂ ನನಗೆ ಅರ್ಥ ತಿಳಿಸಿಕೊಡದ ಹೊರತು ಅದು ನನಗೆ ಹೇಗೆ ತಿಳಿದೀತು?” ಎಂದು ಹೇಳಿ, ನೀನು ರಥವನ್ನು ಹತ್ತಿ ನನ್ನ ಬಳಿಯಲ್ಲಿ ಕುಳಿತುಕೋ ಎಂಬುದಾಗಿ ಫಿಲಿಪ್ಪನನ್ನು ಕೇಳಿಕೊಂಡನು.
Bahabashe yiki “amanye manyumantiye caro kange fwetang membori? ken Filibus adou mor diker kwika ceronen nayi kange cho.
32 ೩೨ ಅವನು ಓದುತ್ತಿದ್ದ ಶಾಸ್ತ್ರವಚನವು ಯಾವುದೆಂದರೆ, “ವಧಿಸುವಸ್ಥಾನಕ್ಕೆ ಒಯ್ಯಲ್ಪಡುವ ಕುರಿಮರಿಯಂತೆ ಆತನು ಒಯ್ಯಲ್ಪಟ್ಟನು; ಮತ್ತು ಕುರಿಮರಿಯು ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವಂತೆ ಆತನು ಬಾಯಿ ತೆರೆಯದೆ ಮೌನವಾಗಿದ್ದನು.
Won cho dikero Bahabashe kiyeti “Ciin yaken kicho mu kwame fiye biyeka bir-bir tak na be kwame kom nob cangkab, wombo nyi.
33 ೩೩ ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.
Dor yiber dorer cer ci macinen bolang kebo mor luma we ane kercero car kotiye? wor cii tum dukumece dorbitiner.
34 ೩೪ ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು
La Tee me filibus yiki, “min kennen yiye we niker dukumerowo tok kero wotiye? kidor cer kaka'a nikange kidumenka?
35 ೩೫ ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.
Filibus Teer kero dor bifumer Ishaya Lan ma cinen ker kwamaro.
36 ೩೬ ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು.
Kambo ciyaken nureri, cin lam kong caji kange Tee wuro yiki “To, mwambo wofo, yebwi mani a yumen mwem kwamam botiye?
37 ೩೭ ಕಂಚುಕಿಯು, “ಆಗೋ, ನೀರು; ನನಗೆ ದೀಕ್ಷಾಸ್ನಾನವಾಗುವುದಕ್ಕೆ ಅಡ್ಡಿ ಏನು?” ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆ ಕೊಟ್ಟನು;
Filibus yiki “No mun ne bilenke win mor nerer mweri, cin yumwen mwem kwamambo. Dila Bahabashe yiki minne bileke.
38 ೩೮ ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
La Bahabashe yiki atim kidiker kwikaro. Lachin yuchinenmwembo.
39 ೩೯ ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.
Kambo chi cherum mwembo nenneri yuwatangbe kwamako dum Filibus Teeu totensobo tak, la yakenti naken bilang tumboti.
40 ೪೦ ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
Dila filibus cerkangeu Azotus. Tiyangem bitinecho token ker kwamamaroti bitine cho nen yacin lamciko kaisariya.

< ಅಪೊಸ್ತಲರ ಕೃತ್ಯಗಳ 8 >