< ಕೊಲೊಸ್ಸೆಯರಿಗೆ ಬರೆದ ಪತ್ರಿಕೆ 1 >

1 ದೇವರ ಚಿತ್ತಾನುಸಾರವಾಗಿ ಕ್ರಿಸ್ತಯೇಸುವಿನ ಅಪೊಸ್ತಲನಾಗಿರುವ ಪೌಲನೂ ಮತ್ತು ಸಹೋದರನಾದ ತಿಮೊಥೆಯನು,
Павло, з волі Божої апостол Христа Ісуса, і брат Тимофій.
2 ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗು ಕ್ರಿಸ್ತನಲ್ಲಿ ನಂಬಿಗಸ್ತರಾದ ಸಹೋದರರಿಗೆ ಬರೆಯುವುದೇನೆಂದರೆ, ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಮತ್ತು ಶಾಂತಿಯೂ ಉಂಟಾಗಲಿ.
Святим та вірним братам у Христі, що в Колосах. Благодать вам і мир від Бога, нашого Отця.
3 ನಿಮಗೋಸ್ಕರ ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮ ನಿಮಿತ್ತವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾಗಿರುವ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇವೆ.
Молячись за вас, ми завжди дякуємо Богу, Отцю нашого Господа Ісуса Христа,
4 ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ.
адже ми почули про вашу віру в Христа Ісуса й про любов, яку ви виявляєте до всіх святих
5 ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.
через надію, яка зберігається на небесах для вас і яку ви почули раніше в Слові істини – Добрій Звістці,
6 ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.
що дійшла до вас. Вона приносить плоди та зростає як у всьому світі, так і поміж вами з того дня, коли ви почули й пізнали Божу благодать в істині.
7 ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.
Цього ви навчилися від Епафраса, який, як і ми, є улюбленим рабом та вірним служителем Христа для вас
8 ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯವನ್ನು ನನಗೆ ತಿಳಿಸಿದವನು ಆತನೇ.
і який відкрив нам вашу любов у Дусі.
9 ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,
Тому й ми з того дня, як почули про це, не припиняємо молитися за вас і просити, щоб ви були наповнені пізнанням Його волі в усій мудрості та духовному розумінні,
10 ೧೦ ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,
щоб ви гідно жили перед Господом і в усьому Йому догоджали, приносячи плоди кожною доброю справою та зростаючи в пізнанні Бога;
11 ೧೧ ಆತನ ಮಹಿಮಾ ಶಕ್ತಿಯ ಪ್ರಕಾರ ಎಲ್ಲಾ ಸಾಮರ್ಥ್ಯದಲ್ಲಿ ಬಲಹೊಂದಿ, ಎಲ್ಲವನ್ನೂ ತಾಳ್ಮೆಯಿಂದಲೂ, ದೀರ್ಘಶಾಂತಿಯಿಂದಲೂ ಸಹಿಸಿಕೊಳ್ಳುವವರಾಗಿರಬೇಕೆಂತಲೂ,
зміцнюючись усякою силою через могутність Його слави для досягнення стійкості й терпеливості у всіляких [ситуаціях, ] з радістю
12 ೧೨ ದೇವಭಕ್ತರಿಗಾಗಿ ಬೆಳಕಿನಲ್ಲಿರುವ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ನಮ್ಮನ್ನು ಯೋಗ್ಯರನ್ನಾಗಿ ಮಾಡಿದ ತಂದೆಯಾದ ದೇವರಿಗೆ ಆನಂದಪೂರ್ವಕವಾಗಿ ಕೃತಜ್ಞತಾಸ್ತುತಿಯನ್ನು ಸಲ್ಲಿಸುವವರಾಗಬೇಕೆಂತಲೂ ದೇವರನ್ನು ಬೇಡಿಕೊಳ್ಳುತ್ತೇನೆ.
дякуючи Отцеві, Який зробив вас гідними [отримати] частину спадщини святих у світлі.
13 ೧೩ ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.
Він визволив нас від влади темряви та переніс у Царство Свого улюбленого Сина.
14 ೧೪ ಈ ಕುಮಾರನಲ್ಲಿ ನಮ್ಮ ಪಾಪಗಳು ಕ್ಷಮಿಸಲ್ಪಟ್ಟು ನಮಗೆ ವಿಮೋಚನೆಯಾಯಿತು.
У Ньому ми маємо відкуплення через Його кров – прощення гріхів.
15 ೧೫ ಕ್ರಿಸ್ತನು ಅದೃಶ್ಯನಾದ ದೇವರ ಪ್ರತಿರೂಪನೂ, ಸೃಷ್ಟಿಗೆಲ್ಲಾ ಜೇಷ್ಠಪುತ್ರನೂ ಆಗಿದ್ದಾನೆ.
Він – образ невидимого Бога, Первісток усього творіння.
16 ೧೬ ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು.
Адже в Ньому створено все, що на небесах і на землі, видиме та невидиме: чи престоли, чи володарювання, чи начальства, чи авторитети – усе створено через Нього й для Нього.
17 ೧೭ ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.
Він є перед усім, і в Ньому все тримається разом.
18 ೧೮ ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.
Він є Головою тіла – Церкви. Він початок [усього], Первісток серед [воскреслих] із мертвих, щоб в усьому Йому мати першість.
19 ೧೯ ಏಕೆಂದರೆ ಆತನಲ್ಲಿಯೇ ತನ್ನ ಸರ್ವಸಂಪೂರ್ಣತೆಯು ವಾಸವಾಗಿರಬೇಕೆಂತಲೂ,
Адже [Богу] було до вподоби, щоб у Ньому перебувала вся повнота
20 ೨೦ ಮತ್ತು ಆತನು ಶಿಲುಬೆಯ ಮೇಲೆ ಸುರಿಸಿದ ರಕ್ತದಿಂದ ತಾನು ಸಮಾಧಾನವನ್ನುಂಟುಮಾಡಿ, ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ತನ್ನ ಕುಮಾರನ ಮೂಲಕ ತನಗೆ ಸಂಧಾನಪಡಿಸಿಕೊಳ್ಳಬೇಕೆಂತಲೂ ತಂದೆಯಾದ ದೇವರು ಇಚ್ಛಿಸಿದನು.
й щоб через Нього примирити із Собою все, що на землі і на небі, уклавши мир через кров Його хреста.
21 ೨೧ ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.
Ви колись були відчуженими й ворогами у [вашому] розумі через ваші погані вчинки.
22 ೨೨ ಈಗಲಾದರೋ ದೇವರು ನಿಮ್ಮನ್ನು ಯೇಸುಕ್ರಿಸ್ತನ ಶಾರೀರಿಕ ಮರಣದ ಮೂಲಕವಾಗಿ ಸಂಧಾನಪಡಿಸಿಕೊಂಡಿದ್ದಾನೆ. ದೇವರು ತನ್ನ ಸನ್ನಿಧಿಯಲ್ಲಿ ನಿಮ್ಮನ್ನು ಪರಿಶುದ್ಧರನ್ನಾಗಿಯೂ, ನಿರ್ದೋಷಿಗಳನ್ನಾಗಿಯೂ, ನಿರಪರಾಧಿಗಳನ್ನಾಗಿಯೂ ನಿಲ್ಲಿಸಬೇಕೆಂದು ಹೀಗೆ ಮಾಡಿದ್ದಾನೆ.
Але тепер Він примирив [вас] у Своєму людському тілі через смерть, щоб поставити вас святими, непорочними й невинними перед Собою,
23 ೨೩ ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.
якщо ви залишитеся стійкими й утвердженими у вірі, не віддаляючись від надії Доброї Звістки, яку ви почули і яка була проповідувана всьому творінню під небом і служителем якої став я, Павло.
24 ೨೪ ನಾನು ಈಗ ನಿಮಗೋಸ್ಕರ ಅನುಭವಿಸುತ್ತಿರುವ ಬಾಧೆಗಳಲ್ಲಿ ನನಗೆ ಸಂತೋಷವಿದೆ. ಕ್ರಿಸ್ತನ ಯಾತನೆಗಳಲ್ಲಿ ಕೊರತೆಯಾಗಿರುವುದನ್ನು ಆತನ ಸಭೆಯೆಂಬ ದೇಹಕೋಸ್ಕರ ನಾನು ನನ್ನ ದೇಹದಲ್ಲಿ ಅನುಭವಿಸಿ ತೀರಿಸುತ್ತೇನೆ.
Тепер я радію в стражданнях за вас і доповнюю в моєму тілі нестачу Христових страждань заради Його тіла, яким є Церква.
25 ೨೫ ದೇವರ ಸಂಕಲ್ಪದ ಮೇರೆಗೆ ನಿಮ್ಮ ಪ್ರಯೋಜನಕ್ಕೋಸ್ಕರವಾಗಿ ನಾನು ಸಭೆಗೆ ಸೇವಕನಾದೆನು. ದೇವರು ತನ್ನ ವಾಕ್ಯವನ್ನು ಸಂಪೂರ್ಣವಾಗಿ ತಿಳಿಸುವ ಕಾರ್ಯವನ್ನು ನನಗೆ ದಯಪಾಲಿಸಿದನು.
Я став її служителем за Божим розпорядженням, яке було дане мені для вас, – сповнити Боже Слово,
26 ೨೬ ಈ ರಹಸ್ಯವಾದ ಸತ್ಯವಾಕ್ಯವು ಹಿಂದಿನ ಯುಗಯುಗಗಳಿಂದಲೂ, ತಲತಲಾಂತರಗಳಿಂದಲೂ ಮರೆಯಾಗಿತ್ತು, ಆದರೆ ಈಗ ದೇವರು ಅದನ್ನು ತನ್ನ ದೇವಜನರಿಗೆ ಪ್ರಕಟಿಸಿದ್ದಾನೆ. (aiōn g165)
таємницю, яка була прихована впродовж віків і поколінь, але тепер відкрита Його святим. (aiōn g165)
27 ೨೭ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.
Бог захотів дати їм пізнати, яким є багатство слави цієї таємниці між язичниками: Христос у вас – надія слави!
28 ೨೮ ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.
Його ми проповідуємо, наставляючи й навчаючи кожну людину з усією мудрістю, щоб представити кожну людину довершеною в Христі.
29 ೨೯ ನನ್ನಲ್ಲಿ ಕಾರ್ಯಸಾಧಿಸುವ ದೇವರ ಬಲದಿಂದ ಇದಕ್ಕೊಸ್ಕರವೇ ಶ್ರಮಿಸಿ ಹೋರಾಡುತ್ತೇನೆ.
Заради цього я завзято працюю, борючись Його силою, яка могутньо діє в мені.

< ಕೊಲೊಸ್ಸೆಯರಿಗೆ ಬರೆದ ಪತ್ರಿಕೆ 1 >