< ಯೆಹೆಜ್ಕೇಲನು 6 >

1 ಯೆಹೋವನು ಈ ಮಾತನ್ನು ನನಗೆ ದಯಪಾಲಿಸಿದನು,
וַיְהִי דְבַר־יְהוָה אֵלַי לֵאמֹֽר׃
2 “ನರಪುತ್ರನೇ, ಇಸ್ರಾಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು, ಅವುಗಳನ್ನು ಕುರಿತು ಪ್ರವಾದಿಸು.
בֶּן־אָדָם שִׂים פָּנֶיךָ אֶל־הָרֵי יִשְׂרָאֵל וְהִנָּבֵא אֲלֵיהֶֽם׃
3 ‘ಇಸ್ರಾಯೇಲಿನ ಬೆಟ್ಟಗಳೇ, ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ; ಕರ್ತನಾದ ಯೆಹೋವನು ಬೆಟ್ಟಗುಡ್ಡಗಳಿಗೂ, ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾನೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.
וְאָמַרְתָּ הָרֵי יִשְׂרָאֵל שִׁמְעוּ דְּבַר־אֲדֹנָי יְהוִה כֹּה־אָמַר אֲדֹנָי יְהוִה לֶהָרִים וְלַגְּבָעוֹת לָאֲפִיקִים ולגאית וְלַגֵּאָיוֹת הִנְנִי אֲנִי מֵבִיא עֲלֵיכֶם חֶרֶב וְאִבַּדְתִּי בָּמֽוֹתֵיכֶֽם׃
4 “‘ನಿಮ್ಮ ಯಜ್ಞವೇದಿಗಳು ಹಾಳಾಗುವವು, ನಿಮ್ಮ ಸೂರ್ಯಸ್ತಂಭಗಳು ಒಡೆಯಲ್ಪಡುವವು, ನಿಮ್ಮವರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.
וְנָשַׁמּוּ מִזְבְּחוֹתֵיכֶם וְנִשְׁבְּרוּ חַמָּֽנֵיכֶם וְהִפַּלְתִּי חַלְלֵיכֶם לִפְנֵי גִּלּוּלֵיכֶֽם׃
5 ನಾನು ಇಸ್ರಾಯೇಲರ ಶವಗಳನ್ನು ಅವರ ವಿಗ್ರಹಗಳ ಮುಂದೆ ಬಿಸಾಡಿ ನಿಮ್ಮ ಯಜ್ಞವೇದಿಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಬಿಸಾಡಿಬಿಡುವೆನು.
וְנָתַתִּי אֶת־פִּגְרֵי בְּנֵי יִשְׂרָאֵל לִפְנֵי גִּלּֽוּלֵיהֶם וְזֵרִיתִי אֶת־עַצְמוֹתֵיכֶם סְבִיבוֹת מִזְבְּחוֹתֵיכֶֽם׃
6 “‘ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುದರಿಂದಲೂ, ಪೂಜಾ ಸ್ಥಳಗಳು ಪಾಳುಬೀಳುವುದರಿಂದಲೂ ನಿಮ್ಮ ಯಜ್ಞವೇದಿಗಳು ಹಾಳಾಗುವವು; ನಿಮ್ಮ ವಿಗ್ರಹಗಳು ಒಡೆಯಲ್ಪಟ್ಟು ಇಲ್ಲವಾಗುವವು, ನಿಮ್ಮ ಸೂರ್ಯಸ್ತಂಭಗಳು ಕಡಿಯಲ್ಪಡುವುವು.
בְּכֹל מוֹשְׁבוֹתֵיכֶם הֶעָרִים תֶּחֱרַבְנָה וְהַבָּמוֹת תִּישָׁמְנָה לְמַעַן יֶחֶרְבוּ וְיֶאְשְׁמוּ מִזְבְּחֽוֹתֵיכֶם וְנִשְׁבְּרוּ וְנִשְׁבְּתוּ גִּלּוּלֵיכֶם וְנִגְדְּעוּ חַמָּנֵיכֶם וְנִמְחוּ מַעֲשֵׂיכֶֽם׃
7 ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
וְנָפַל חָלָל בְּתֽוֹכְכֶם וִֽידַעְתֶּם כִּֽי־אֲנִי יְהוָֽה׃
8 “‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.
וְהוֹתַרְתִּי בִּהְיוֹת לָכֶם פְּלִיטֵי חֶרֶב בַּגּוֹיִם בְּהִזָּרֽוֹתֵיכֶם בָּאֲרָצֽוֹת׃
9 ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.
וְזָכְרוּ פְלִֽיטֵיכֶם אוֹתִי בַּגּוֹיִם אֲשֶׁר נִשְׁבּוּ־שָׁם אֲשֶׁר נִשְׁבַּרְתִּי אֶת־לִבָּם הַזּוֹנֶה אֲשֶׁר־סָר מֵֽעָלַי וְאֵת עֵֽינֵיהֶם הַזֹּנוֹת אַחֲרֵי גִּלּֽוּלֵיהֶם וְנָקֹטּוּ בִּפְנֵיהֶם אֶל־הָֽרָעוֹת אֲשֶׁר עָשׂוּ לְכֹל תּוֹעֲבֹתֵיהֶֽם׃
10 ೧೦ ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.’”
וְיָדְעוּ כִּֽי־אֲנִי יְהוָה לֹא אֶל־חִנָּם דִּבַּרְתִּי לַעֲשׂוֹת לָהֶם הָרָעָה הַזֹּֽאת׃
11 ೧೧ ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆಹೊಡೆದು ನೆಲವನ್ನು ಒದ್ದು ಹೀಗೆ ಹೇಳು, ‘ಆಹಾ, ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.
כֹּֽה־אָמַר אֲדֹנָי יְהוִה הַכֵּה בְכַפְּךָ וּרְקַע בְּרַגְלְךָ וֶֽאֱמָר־אָח אֶל כָּל־תּוֹעֲבוֹת רָעוֹת בֵּית יִשְׂרָאֵל אֲשֶׁר בַּחֶרֶב בָּרָעָב וּבַדֶּבֶר יִפֹּֽלוּ׃
12 ೧೨ ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು, ತಪ್ಪಿಸಿಕೊಂಡು ಉಳಿದವನು ಕ್ಷಾಮದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.
הָרָחוֹק בַּדֶּבֶר יָמוּת וְהַקָּרוֹב בַּחֶרֶב יִפּוֹל וְהַנִּשְׁאָר וְהַנָּצוּר בָּרָעָב יָמוּת וְכִלֵּיתִי חֲמָתִי בָּֽם׃
13 ೧೩ ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.
וִֽידַעְתֶּם כִּֽי־אֲנִי יְהוָה בִּֽהְיוֹת חַלְלֵיהֶם בְּתוֹךְ גִּלּוּלֵיהֶם סְבִיבוֹת מִזְבְּחֽוֹתֵיהֶם אֶל כָּל־גִּבְעָה רָמָה בְּכֹל ׀ רָאשֵׁי הֶהָרִים וְתַחַת כָּל־עֵץ רַֽעֲנָן וְתַחַת כָּל־אֵלָה עֲבֻתָּה מְקוֹם אֲשֶׁר נָֽתְנוּ־שָׁם רֵיחַ נִיחֹחַ לְכֹל גִּלּוּלֵיהֶֽם׃
14 ೧೪ ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”
וְנָטִיתִי אֶת־יָדִי עֲלֵיהֶם וְנָתַתִּי אֶת־הָאָרֶץ שְׁמָמָה וּמְשַׁמָּה מִמִּדְבַּר דִּבְלָתָה בְּכֹל מוֹשְׁבֽוֹתֵיהֶם וְיָדְעוּ כִּֽי־אֲנִי יְהוָֽה׃

< ಯೆಹೆಜ್ಕೇಲನು 6 >