< ಆದಿಕಾಂಡ 20 >

1 ಅಬ್ರಹಾಮನು ಅಲ್ಲಿಂದ ಕಾನಾನ್ ದೇಶದ ದಕ್ಷಿಣ ಸೀಮೆಗೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸ ಮಾಡಿ ಕೆಲವು ಕಾಲ ಗೆರಾರಿನಲ್ಲೂ ವಾಸಮಾಡಿದನು.
וַיִּסַּ֨ע מִשָּׁ֤ם אַבְרָהָם֙ אַ֣רְצָה הַנֶּ֔גֶב וַיֵּ֥שֶׁב בֵּין־קָדֵ֖שׁ וּבֵ֣ין שׁ֑וּר וַיָּ֖גָר בִּגְרָֽר׃
2 ಅವನು ತನ್ನ ಹೆಂಡತಿಯಾದ ಸಾರಳನ್ನು ತಂಗಿಯೆಂದು ಹೇಳಿಕೊಂಡದ್ದರಿಂದ, ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಇರಿಸಿಕೊಂಡನು.
וַיֹּ֧אמֶר אַבְרָהָ֛ם אֶל־שָׂרָ֥ה אִשְׁתּ֖וֹ אֲחֹ֣תִי הִ֑וא וַיִּשְׁלַ֗ח אֲבִימֶ֙לֶךְ֙ מֶ֣לֶךְ גְּרָ֔ר וַיִּקַּ֖ח אֶת־שָׂרָֽה׃
3 ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.
וַיָּבֹ֧א אֱלֹהִ֛ים אֶל־אֲבִימֶ֖לֶךְ בַּחֲל֣וֹם הַלָּ֑יְלָה וַיֹּ֣אמֶר ל֗וֹ הִנְּךָ֥ מֵת֙ עַל־הָאִשָּׁ֣ה אֲשֶׁר־לָקַ֔חְתָּ וְהִ֖וא בְּעֻ֥לַת בָּֽעַל׃
4 ಅಬೀಮೆಲೆಕನು ಆಕೆಯನ್ನು ಸಂಗಮಿಸಿರಲಿಲ್ಲ. ಅವನು, “ಕರ್ತನೇ, ನೀತಿವಂತರಾದ ಜನರನ್ನೂ ನಾಶಮಾಡುವಿಯಾ?
וַאֲבִימֶ֕לֶךְ לֹ֥א קָרַ֖ב אֵלֶ֑יהָ וַיֹּאמַ֕ר אֲדֹנָ֕י הֲג֥וֹי גַּם־צַדִּ֖יק תַּהֲרֹֽג׃
5 ಆ ಮನುಷ್ಯನು ಈಕೆ ತನಗೆ ತಂಗಿಯಾಗಬೇಕೆಂದು ಹೇಳಿದನು. ಈಕೆಯೂ ಅವನು ತನಗೆ ಅಣ್ಣನಾಗಬೇಕೆಂದು ಹೇಳಿದಳು. ನಾನು ಯಥಾರ್ಥ ಮನಸ್ಸಿನಿಂದಲೂ, ಶುದ್ಧ ಹಸ್ತದಿಂದಲೂ ಇದನ್ನು ಮಾಡಿದೆನು” ಎಂದನು.
הֲלֹ֨א ה֤וּא אָֽמַר־לִי֙ אֲחֹ֣תִי הִ֔וא וְהִֽיא־גַם־הִ֥וא אָֽמְרָ֖ה אָחִ֣י ה֑וּא בְּתָם־לְבָבִ֛י וּבְנִקְיֹ֥ן כַּפַּ֖י עָשִׂ֥יתִי זֹֽאת׃
6 ಅದಕ್ಕೆ ದೇವರು, “ನೀನು, ಇದನ್ನು ಯಥಾರ್ಥ ಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.
וַיֹּאמֶר֩ אֵלָ֨יו הָֽאֱלֹהִ֜ים בַּחֲלֹ֗ם גַּ֣ם אָנֹכִ֤י יָדַ֙עְתִּי֙ כִּ֤י בְתָם־לְבָבְךָ֙ עָשִׂ֣יתָ זֹּ֔את וָאֶחְשֹׂ֧ךְ גַּם־אָנֹכִ֛י אֽוֹתְךָ֖ מֵחֲטוֹ־לִ֑י עַל־כֵּ֥ן לֹא־נְתַתִּ֖יךָ לִנְגֹּ֥עַ אֵלֶֽיהָ׃
7 ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ಅವನಿಗೆ ಒಪ್ಪಿಸಿಬಿಡು. ಅವನು ಪ್ರವಾದಿ, ನಿನಗೋಸ್ಕರ ಅವನು ನನಗೆ ವಿಜ್ಞಾಪಿಸುವನು ಮತ್ತು ನೀನು ಬದುಕುವಿ. ಆಕೆಯನ್ನು ಒಪ್ಪಿಸದಿದ್ದರೆ ನೀನೂ ನಿನ್ನವರೆಲ್ಲರೂ ಮರಣಹೊಂದುವಿರಿ ಇದು ಖಂಡಿತ ಎಂದು ತಿಳಿದುಕೋ” ಎಂದು ಕನಸಿನಲ್ಲಿ ಹೇಳಿದನು.
וְעַתָּ֗ה הָשֵׁ֤ב אֵֽשֶׁת־הָאִישׁ֙ כִּֽי־נָבִ֣יא ה֔וּא וְיִתְפַּלֵּ֥ל בַּֽעַדְךָ֖ וֶֽחְיֵ֑ה וְאִם־אֵֽינְךָ֣ מֵשִׁ֗יב דַּ֚ע כִּי־מ֣וֹת תָּמ֔וּת אַתָּ֖ה וְכָל־אֲשֶׁר־לָֽךְ׃
8 ಬೆಳಿಗ್ಗೆ ಅಬೀಮೆಲೆಕನು ತನ್ನ ಸೇವಕರೆಲ್ಲರನ್ನು ಕೂಡಿಸಿ ಈ ಸಂಗತಿಗಳನ್ನೆಲ್ಲಾ ತಿಳಿಸಲು ಅವರು ಬಹಳ ಭಯಪಟ್ಟರು.
וַיַּשְׁכֵּ֨ם אֲבִימֶ֜לֶךְ בַּבֹּ֗קֶר וַיִּקְרָא֙ לְכָל־עֲבָדָ֔יו וַיְדַבֵּ֛ר אֶת־כָּל־הַדְּבָרִ֥ים הָאֵ֖לֶּה בְּאָזְנֵיהֶ֑ם וַיִּֽירְא֥וּ הָאֲנָשִׁ֖ים מְאֹֽד׃
9 ಅಬೀಮೆಲೆಕನು ಅಬ್ರಹಾಮನನ್ನು ಕರೆದು, “ನೀನು ನಮಗೆ ಮಾಡಿದ್ದೇನು? ನಾನು ಯಾವ ಪಾಪ ಮಾಡಿದ್ದರಿಂದ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಮಹಾಪಾತಕಕ್ಕೆ ಒಳಪಡಿಸಿದಿ? ನೀನು ಮಾಡಬಾರದ ಕಾರ್ಯಗಳನ್ನು ಮಾಡಲು ನಾನು ನಿನಗೇನು ಮಾಡಿದೆ” ಎಂದು ಹೇಳಿ,
וַיִּקְרָ֨א אֲבִימֶ֜לֶךְ לְאַבְרָהָ֗ם וַיֹּ֨אמֶר ל֜וֹ מֶֽה־עָשִׂ֤יתָ לָּ֙נוּ֙ וּמֶֽה־חָטָ֣אתִי לָ֔ךְ כִּֽי־הֵבֵ֧אתָ עָלַ֛י וְעַל־מַמְלַכְתִּ֖י חֲטָאָ֣ה גְדֹלָ֑ה מַעֲשִׂים֙ אֲשֶׁ֣ר לֹא־יֵֽעָשׂ֔וּ עָשִׂ֖יתָ עִמָּדִֽי׃
10 ೧೦ “ನೀನು ಯಾವ ಉದ್ದೇಶದಿಂದ ಈ ಕಾರ್ಯವನ್ನು ಮಾಡಿದೆ” ಎಂದು ಅಬೀಮೆಲೆಕನು ಅಬ್ರಹಾಮನನ್ನು ಕೇಳಿದನು.
וַיֹּ֥אמֶר אֲבִימֶ֖לֶךְ אֶל־אַבְרָהָ֑ם מָ֣ה רָאִ֔יתָ כִּ֥י עָשִׂ֖יתָ אֶת־הַדָּבָ֥ר הַזֶּֽה׃
11 ೧೧ ಅದಕ್ಕೆ ಅಬ್ರಹಾಮನು, “ಈ ಸ್ಥಳದವರು ದೇವರ ಭಯಭಕ್ತಿ ಇಲ್ಲದವರಾಗಿ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರೆಂದು ಭಾವಿಸಿದೆನು.
וַיֹּ֙אמֶר֙ אַבְרָהָ֔ם כִּ֣י אָמַ֗רְתִּי רַ֚ק אֵין־יִרְאַ֣ת אֱלֹהִ֔ים בַּמָּק֖וֹם הַזֶּ֑ה וַהֲרָג֖וּנִי עַל־דְּבַ֥ר אִשְׁתִּֽי׃
12 ೧೨ ಅದಲ್ಲದೆ ಆಕೆ ನಿಜವಾಗಿ ನನ್ನ ತಂಗಿ, ನನ್ನ ತಂದೆಯ ಮಗಳೇ; ಆದರೆ ನನ್ನ ತಾಯಿಯ ಮಗಳಲ್ಲವಾದುದರಿಂದ ನನಗೆ ಹೆಂಡತಿಯಾದಳು.
וְגַם־אָמְנָ֗ה אֲחֹתִ֤י בַת־אָבִי֙ הִ֔וא אַ֖ךְ לֹ֣א בַת־אִמִּ֑י וַתְּהִי־לִ֖י לְאִשָּֽׁה׃
13 ೧೩ ನಾನು ದೇವರ ಸಂಕಲ್ಪದಿಂದ ತಂದೆಯ ಮನೆಯನ್ನು ಬಿಟ್ಟು ದೇಶಾಂತರ ಹೋಗುವುದಕ್ಕೆ ಹೊರಟಾಗ ನಾನು ಆಕೆಗೆ, ‘ನಾವು ಹೋಗುವ ಎಲ್ಲಾ ಸ್ಥಳಗಳಲ್ಲಿಯೂ ನನಗೆ ನಿನ್ನಿಂದ ಒಂದು ದಯೆ ಆಗಬೇಕು. ಅದು, ಏನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು’ ಎಂದು ತಿಳಿಸಿದೆನು” ಎಂದನು.
וַיְהִ֞י כַּאֲשֶׁ֧ר הִתְע֣וּ אֹתִ֗י אֱלֹהִים֮ מִבֵּ֣ית אָבִי֒ וָאֹמַ֣ר לָ֔הּ זֶ֣ה חַסְדֵּ֔ךְ אֲשֶׁ֥ר תַּעֲשִׂ֖י עִמָּדִ֑י אֶ֤ל כָּל־הַמָּקוֹם֙ אֲשֶׁ֣ר נָב֣וֹא שָׁ֔מָּה אִמְרִי־לִ֖י אָחִ֥י הֽוּא׃
14 ೧೪ ಆಗ ಅಬೀಮೆಲೆಕನು ಅಬ್ರಹಾಮನಿಗೆ ಕುರಿದನಗಳನ್ನೂ ದಾಸದಾಸಿಯರನ್ನೂ ಕೊಟ್ಟು, ಅವನ ಹೆಂಡತಿಯಾದ ಸಾರಳನ್ನು ಅವನಿಗೆ ಒಪ್ಪಿಸಿ,
וַיִּקַּ֨ח אֲבִימֶ֜לֶךְ צֹ֣אן וּבָקָ֗ר וַעֲבָדִים֙ וּשְׁפָחֹ֔ת וַיִּתֵּ֖ן לְאַבְרָהָ֑ם וַיָּ֣שֶׁב ל֔וֹ אֵ֖ת שָׂרָ֥ה אִשְׁתּֽוֹ׃
15 ೧೫ “ಇಗೋ, ಇದು ನನ್ನ ದೇಶ; ಇದರೊಳಗೆ ನಿನಗೆ ಇಷ್ಟವಿದ್ದ ಕಡೆಯಲ್ಲಿ ನೀನು ವಾಸ ಮಾಡಬಹುದು” ಎಂದು ಅಬೀಮೆಲೆಕನು ಹೇಳಿದನು.
וַיֹּ֣אמֶר אֲבִימֶ֔לֶךְ הִנֵּ֥ה אַרְצִ֖י לְפָנֶ֑יךָ בַּטּ֥וֹב בְּעֵינֶ֖יךָ שֵֽׁב׃
16 ೧೬ ಇದಲ್ಲದೆ ಅವನು ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ರೂಪಾಯಿ ಕೊಟ್ಟಿದ್ದೇನೆ; ನಡೆದದ್ದನ್ನು ನಿನ್ನ ಕಡೆಯವರು ಗಮನಕ್ಕೆ ತೆಗೆದುಕೊಳ್ಳದಂತೆ ಇರಲು ಇದು ಪ್ರಾಯಶ್ಚಿವಾಗಿರಲಿ; ನೀನು ಮಾನಸ್ಥಳೆಂದು ಇದರಿಂದ ಎಲ್ಲರೂ ತಿಳಿದುಕೊಳ್ಳುವರು” ಎಂದು ಹೇಳಿದನು.
וּלְשָׂרָ֣ה אָמַ֗ר הִנֵּ֨ה נָתַ֜תִּי אֶ֤לֶף כֶּ֙סֶף֙ לְאָחִ֔יךְ הִנֵּ֤ה הוּא־לָךְ֙ כְּס֣וּת עֵינַ֔יִם לְכֹ֖ל אֲשֶׁ֣ר אִתָּ֑ךְ וְאֵ֥ת כֹּ֖ל וְנֹכָֽחַת׃
17 ೧೭ ತರುವಾಯ ಅಬ್ರಹಾಮನು ದೇವರನ್ನು ಬೇಡಿಕೊಳ್ಳಲು ದೇವರು ಅಬೀಮೆಲೆಕನನ್ನೂ, ಅವನ ಪತ್ನಿಯನ್ನೂ ಮತ್ತು ದಾಸಿಯರನ್ನೂ ವಾಸಿಮಾಡಿದ್ದರಿಂದ ಅವರಿಗೆ ಮಕ್ಕಳಾದರು.
וַיִּתְפַּלֵּ֥ל אַבְרָהָ֖ם אֶל־הָאֱלֹהִ֑ים וַיִּרְפָּ֨א אֱלֹהִ֜ים אֶת־אֲבִימֶ֧לֶךְ וְאֶת־אִשְׁתּ֛וֹ וְאַמְהֹתָ֖יו וַיֵּלֵֽדוּ׃
18 ೧೮ ಅಬ್ರಹಾಮನ ಹೆಂಡತಿಯಾದ ಸಾರಳ ನಿಮಿತ್ತ ಮೊದಲು ಯೆಹೋವನು ಅಬೀಮೆಲೆಕನ ಮನೆಯಲ್ಲಿದ್ದ ಸ್ತ್ರೀಯರೆಲ್ಲರನ್ನು ಬಂಜೆಯರನ್ನಾಗಿ ಮಾಡಿದ್ದನು.
כִּֽי־עָצֹ֤ר עָצַר֙ יְהוָ֔ה בְּעַ֥ד כָּל־רֶ֖חֶם לְבֵ֣ית אֲבִימֶ֑לֶךְ עַל־דְּבַ֥ר שָׂרָ֖ה אֵ֥שֶׁת אַבְרָהָֽם׃ ס

< ಆದಿಕಾಂಡ 20 >