< ಯೆಶಾಯನು 54 >

1 “ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ.
Mirebeha ry betsiterake, ihe tsy nanaranake, mipoñafa sabo, mipazapazaha ry tsy nitsongo! Fa maro ty ana’ i vahiniy, te amo ana’ i amam-baliio, hoe t’Iehovà.
2 ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು.
Itàro ty toen-kiboho’o, tibaho o lamba fañefen’ akiba’oo, naho ko tomoreñe; halavao o tali’oo, vaho haozaro o tsato’oo.
3 ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು.
Amy t’ie hañivake mb’ankavana, naho mb’ankavia; naho handova o kilakila’ ndatio o tarira’oo, vaho hampimoneñañe o rova mangoakoakeo.
4 “ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.
Ko hemban-drehe fa tsy ho salatse, ko meñatse, fa tsy hinjèñe, toe ho haliño’o ty hameñaran-katora’o, vaho tsy ho tiahi’o ka ty fañinjeañe i haramavoi’oy.
5 “ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.
Fa tañanjomba’o i Mpamboatse azoy, Iehovà’ i Màroy ty tahina’e; t’i Masi’ Israele ro Mpijeba’o, t’i Andrianañahare’ ty tane toy ro fikanjiañe Aze.
6 ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ.
Fa nitok’azo t’Iehovà hoe valy naforintseñe naho mihontoke, aa kanao valin-katora’e, hapoke hao? hoe t’i Andrianañahare.
7 “ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು.
Andro bory ty namorin­tseñako azo; fe am-piferenaiñañe jabajaba ty hanontonako azo.
8 ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.
Fifomboañe fohe ty nañetahako ama’o ty tareheko; fe am-pikokoañe migahiñe nainai’e ty hiferenaiñako, hoe t’Iehovà Mpijeba’o.
9 “ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.
Toe rano’ i ­Noake amako itoy; amy te hambañe ami’ty nandi­liako te tsy hañàmpo ty tane toy ka i rano’ i Noakey, le nititiheko ka t’ie tsy hibosehako vaho tsy ho trevoheko.
10 ೧೦ ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ.
Fa hafahañe o vohitseo, naho haveve o haboañeo; fe tsy hieng’azo ty fiferenaiñako, vaho tsy hovaeñe i fañinam-pilongoakoy, hoe t’Iehovà mpiferenaiñ’azo.
11 ೧೧ ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು.
O ry malorè avalitaboa’ i tio-beiy, ie tsy amam-pañohò, heheke te harafeko am-bolo soa o vato’oo, naho ho tsenèko an-tsafira o faha’oo.
12 ೧೨ ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು.
Hanoeko roy o tilik’abo’oo, le am-bato mañabasà o lalam-bei’oo, vaho am-batosoa o olotsolotseo.
13 ೧೩ ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು.
Hene hanare’ Iehovà o ana’oo; vaho hampitomboeñe ty fierañeraña’ o keleia’oo.
14 ೧೪ ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು.
Horizañe an-kavantañan-drehe; hitots’azo ty famorekekeañe, tsy hihembaña’o, tsy hitotok’ azo ka o fandrotsahañeo.
15 ೧೫ ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು.
Mete hifanontone iereo, fa tsy ty amako; hikorovoke añatrefa’o eo ze mikitroke azo.
16 ೧೬ ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ.
Izaho ‘nio ty nanao i mpanefe mitiotioke vaen’afoy, Ie añakara’e fialiañe hitoloña’e; nanoeko ka ty mpijoy hijoia’e.
17 ೧೭ ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ.
Tsy hanjofake ze fialiañe namboareñe haname azo; naho fonga hafà’o ze fameleke hitroatse hiatreatre azo an-jaka. izay ty lova’ o mpitoro’ Iehovào, vaho tamako ty havantaña’ iareo hoe t’Iehovà.

< ಯೆಶಾಯನು 54 >

A Dove is Sent Forth from the Ark
A Dove is Sent Forth from the Ark