< ನ್ಯಾಯಸ್ಥಾಪಕರು 18 >

1 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆ ವರೆಗೂ ಇಸ್ರಾಯೇಲರಲ್ಲಿ ಸ್ವತ್ತು ದೊರಕಿರಲಿಲ್ಲ, ಅವರು ತಮಗೋಸ್ಕರ ವಾಸಸ್ಥಳವನ್ನು ಹುಡುಕುತ್ತಿದ್ದರು.
בַּיָּמִ֣ים הָהֵ֔ם אֵ֥ין מֶ֖לֶךְ בְּיִשְׂרָאֵ֑ל וּבַיָּמִ֣ים הָהֵ֗ם שֵׁ֣בֶט הַדָּנִ֞י מְבַקֶּשׁ־ל֤וֹ נַֽחֲלָה֙ לָשֶׁ֔בֶת כִּי֩ לֹֽא־נָ֨פְלָה לּ֜וֹ עַד־הַיּ֥וֹם הַה֛וּא בְּתוֹךְ־שִׁבְטֵ֥י יִשְׂרָאֵ֖ל בְּנַחֲלָֽה׃ ס
2 ಅವರು ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದು ಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ ಲಯಿಷ್ ದೇಶವನ್ನು ಸಂಚರಿಸಿ ನೋಡಿರಿ” ಎಂದು ಆಜ್ಞಾಪಿಸಿ ಕಳುಹಿಸಿದರು. ಇವರು ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.
וַיִּשְׁלְח֣וּ בְנֵי־דָ֣ן ׀ מִֽמִּשְׁפַּחְתָּ֡ם חֲמִשָּׁ֣ה אֲנָשִׁ֣ים מִקְצוֹתָם֩ אֲנָשִׁ֨ים בְּנֵי־חַ֜יִל מִצָּרְעָ֣ה וּמֵֽאֶשְׁתָּאֹ֗ל לְרַגֵּ֤ל אֶת־הָאָ֙רֶץ֙ וּלְחָקְרָ֔הּ וַיֹּאמְר֣וּ אֲלֵהֶ֔ם לְכ֖וּ חִקְר֣וּ אֶת־הָאָ֑רֶץ וַיָּבֹ֤אוּ הַר־אֶפְרַ֙יִם֙ עַד־בֵּ֣ית מִיכָ֔ה וַיָּלִ֖ינוּ שָֽׁם׃
3 ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತನಾಡುವುದನ್ನು ಕೇಳಿ, ಗುರುತುಹಿಡಿದು, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತೀ? ಏನು ಸಿಕ್ಕುತ್ತದೆ” ಎಂದು ಅವನನ್ನು ಕೇಳಲು ಅವನು,
הֵ֚מָּה עִם־בֵּ֣ית מִיכָ֔ה וְהֵ֣מָּה הִכִּ֔ירוּ אֶת־ק֥וֹל הַנַּ֖עַר הַלֵּוִ֑י וַיָּס֣וּרוּ שָׁ֗ם וַיֹּ֤אמְרוּ לוֹ֙ מִֽי־הֱבִיאֲךָ֣ הֲלֹ֔ם וּמָֽה־אַתָּ֥ה עֹשֶׂ֛ה בָּזֶ֖ה וּמַה־לְּךָ֥ פֹֽה׃
4 ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ, ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.
וַיֹּ֣אמֶר אֲלֵהֶ֔ם כָּזֹ֣ה וְכָזֶ֔ה עָ֥שָׂה לִ֖י מִיכָ֑ה וַיִּשְׂכְּרֵ֕נִי וָאֱהִי־ל֖וֹ לְכֹהֵֽן׃
5 ಆಗ ಅವರು ಅವನಿಗೆ, “ದಯವಿಟ್ಟು ನಮ್ಮ ಪ್ರಯಾಣವು ಸಫಲವಾಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು” ಎಂದು ಬೇಡಿಕೊಳ್ಳಲು
וַיֹּ֥אמְרוּ ל֖וֹ שְׁאַל־נָ֣א בֵאלֹהִ֑ים וְנֵ֣דְעָ֔ה הֲתַצְלִ֣יחַ דַּרְכֵּ֔נוּ אֲשֶׁ֥ר אֲנַ֖חְנוּ הֹלְכִ֥ים עָלֶֽיהָ׃
6 ಅವನು, “ಸಮಾಧಾನದಿಂದ ಹೋಗಿರಿ; ಯೆಹೋವನು ನಿಮ್ಮ ಪ್ರಯಾಣವನ್ನು ಕಟಾಕ್ಷಿಸುವನು” ಅಂದನು.
וַיֹּ֧אמֶר לָהֶ֛ם הַכֹּהֵ֖ן לְכ֣וּ לְשָׁל֑וֹם נֹ֣כַח יְהוָ֔ה דַּרְכְּכֶ֖ם אֲשֶׁ֥ר תֵּֽלְכוּ־בָֽהּ׃ פ
7 ಆ ಐದು ಮಂದಿ ಹೊರಟು ಲಯಿಷಿಗೆ ಬಂದು, ಅಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖ ಸಮಾಧಾನಗಳಿಂದ ಜೀವಿಸುತ್ತಾರೆ; ಅವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ; ಅವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಒಡನಾಟವಿಲ್ಲದವರು ಎಂಬುದನ್ನು ತಿಳಿದುಕೊಂಡು
וַיֵּלְכוּ֙ חֲמֵ֣שֶׁת הָאֲנָשִׁ֔ים וַיָּבֹ֖אוּ לָ֑יְשָׁה וַיִּרְא֣וּ אֶת־הָעָ֣ם אֲשֶׁר־בְּקִרְבָּ֣הּ יוֹשֶֽׁבֶת־לָ֠בֶטַח כְּמִשְׁפַּ֨ט צִדֹנִ֜ים שֹׁקֵ֣ט ׀ וּבֹטֵ֗חַ וְאֵין־מַכְלִ֨ים דָּבָ֤ר בָּאָ֙רֶץ֙ יוֹרֵ֣שׁ עֶ֔צֶר וּרְחֹקִ֥ים הֵ֙מָּה֙ מִצִּ֣דֹנִ֔ים וְדָבָ֥ר אֵין־לָהֶ֖ם עִם־אָדָֽם׃
8 ಹಿಂದಿರುಗಿ ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿರುವ ತಮ್ಮ ಬಂಧುಗಳ ಬಳಿಗೆ ಬಂದರು. ಅವರ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ” ಎಂದು ಅವರನ್ನು ಕೇಳಲು
וַיָּבֹ֙אוּ֙ אֶל־אֲחֵיהֶ֔ם צָרְעָ֖ה וְאֶשְׁתָּאֹ֑ל וַיֹּאמְר֥וּ לָהֶ֛ם אֲחֵיהֶ֖ם מָ֥ה אַתֶּֽם׃
9 ಅವರು, “ಏಳಿರಿ, ಅವರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿರಿ; ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳೋಣ.
וַיֹּאמְר֗וּ ק֚וּמָה וְנַעֲלֶ֣ה עֲלֵיהֶ֔ם כִּ֤י רָאִ֙ינוּ֙ אֶת־הָאָ֔רֶץ וְהִנֵּ֥ה טוֹבָ֖ה מְאֹ֑ד וְאַתֶּ֣ם מַחְשִׁ֔ים אַל־תֵּעָ֣צְל֔וּ לָלֶ֥כֶת לָבֹ֖א לָרֶ֥שֶׁת אֶת־הָאָֽרֶץ׃
10 ೧೦ ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ, ಅವರ ದೇಶವು ಬಹು ವಿಸ್ತಾರವಾಗಿದೆ ಎಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲಿ ಸಿಕ್ಕುವುದಿಲ್ಲ” ಅಂದರು.
כְּבֹאֲכֶ֞ם תָּבֹ֣אוּ ׀ אֶל־עַ֣ם בֹּטֵ֗חַ וְהָאָ֙רֶץ֙ רַחֲבַ֣ת יָדַ֔יִם כִּֽי־נְתָנָ֥הּ אֱלֹהִ֖ים בְּיֶדְכֶ֑ם מָקוֹם֙ אֲשֶׁ֣ר אֵֽין־שָׁ֣ם מַחְס֔וֹר כָּל־דָּבָ֖ר אֲשֶׁ֥ר בָּאָֽרֶץ׃
11 ೧೧ ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು,
וַיִּסְע֤וּ מִשָּׁם֙ מִמִּשְׁפַּ֣חַת הַדָּנִ֔י מִצָּרְעָ֖ה וּמֵאֶשְׁתָּאֹ֑ל שֵֽׁשׁ־מֵא֣וֹת אִ֔ישׁ חָג֖וּר כְּלֵ֥י מִלְחָמָֽה׃
12 ೧೨ ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿರುತ್ತದೆ.
וַֽיַּעֲל֗וּ וַֽיַּחֲנ֛וּ בְּקִרְיַ֥ת יְעָרִ֖ים בִּֽיהוּדָ֑ה עַל־כֵּ֡ן קָרְאוּ֩ לַמָּק֨וֹם הַה֜וּא מַחֲנֵה־דָ֗ן עַ֚ד הַיּ֣וֹם הַזֶּ֔ה הִנֵּ֕ה אַחֲרֵ֖י קִרְיַ֥ת יְעָרִֽים׃
13 ೧೩ ಅವರು ಅಲ್ಲಿಂದ ಮುಂದೆ ಪ್ರಯಾಣಮಾಡಿ ಎಫ್ರಾಯೀಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರ ಬಂದರು.
וַיַּעַבְר֥וּ מִשָּׁ֖ם הַר־אֶפְרָ֑יִם וַיָּבֹ֖אוּ עַד־בֵּ֥ית מִיכָֽה׃
14 ೧೪ ಆಗ ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ಏಫೋದೂ, ದೇವತಾಪ್ರತಿಮೆಗಳೂ, ಕೆತ್ತನೆಯ ಮತ್ತು ಎರಕದ ವಿಗ್ರಹಗಳೂ ಇರುತ್ತವೆಂಬುದು ನಿಮಗೆ ಗೊತ್ತುಂಟೋ?
וַֽיַּעֲנ֞וּ חֲמֵ֣שֶׁת הָאֲנָשִׁ֗ים הַהֹלְכִים֮ לְרַגֵּל֮ אֶת־הָאָ֣רֶץ לַיִשׁ֒ וַיֹּֽאמְרוּ֙ אֶל־אֲחֵיהֶ֔ם הַיְדַעְתֶּ֗ם כִּ֠י יֵ֣שׁ בַּבָּתִּ֤ים הָאֵ֙לֶּה֙ אֵפ֣וֹד וּתְרָפִ֔ים וּפֶ֖סֶל וּמַסֵּכָ֑ה וְעַתָּ֖ה דְּע֥וּ מַֽה־תַּעֲשֽׂוּ׃
15 ೧೫ ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ” ಎಂದು ಹೇಳಿ ತಾವು ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸ ತೊಡಗಿದರು.
וַיָּס֣וּרוּ שָׁ֔מָּה וַיָּבֹ֛אוּ אֶל־בֵּֽית־הַנַּ֥עַר הַלֵּוִ֖י בֵּ֣ית מִיכָ֑ה וַיִּשְׁאֲלוּ־ל֖וֹ לְשָׁלֽוֹם׃
16 ೧೬ ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.
וְשֵׁשׁ־מֵא֣וֹת אִ֗ישׁ חֲגוּרִים֙ כְּלֵ֣י מִלְחַמְתָּ֔ם נִצָּבִ֖ים פֶּ֣תַח הַשָּׁ֑עַר אֲשֶׁ֖ר מִבְּנֵי־דָֽן׃
17 ೧೭ ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ, ಆ ಐದು ಮಂದಿ ಮನೆಯನ್ನು ಹೊಕ್ಕು, ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ, ಏಫೋದನ್ನೂ, ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.
וַֽיַּעֲל֞וּ חֲמֵ֣שֶׁת הָאֲנָשִׁ֗ים הַהֹלְכִים֮ לְרַגֵּ֣ל אֶת־הָאָרֶץ֒ בָּ֣אוּ שָׁ֔מָּה לָקְח֗וּ אֶת־הַפֶּ֙סֶל֙ וְאֶת־הָ֣אֵפ֔וֹד וְאֶת־הַתְּרָפִ֖ים וְאֶת־הַמַּסֵּכָ֑ה וְהַכֹּהֵ֗ן נִצָּב֙ פֶּ֣תַח הַשַּׁ֔עַר וְשֵׁשׁ־מֵא֣וֹת הָאִ֔ישׁ הֶחָג֖וּר כְּלֵ֥י הַמִּלְחָמָֽה׃
18 ೧೮ ಅವರು ಮೀಕನ ಮನೆಯನ್ನು ಹೊಕ್ಕು ಅವುಗಳನ್ನು ತೆಗೆದುಕೊಂಡು ಬರುವಾಗ ಯಾಜಕನು ಅದನ್ನು ಕಂಡು ಅವರಿಗೆ, “ನೀವು ಮಾಡಿದ್ದೇನು” ಅಂದನು.
וְאֵ֗לֶּה בָּ֚אוּ בֵּ֣ית מִיכָ֔ה וַיִּקְחוּ֙ אֶת־פֶּ֣סֶל הָאֵפ֔וֹד וְאֶת־הַתְּרָפִ֖ים וְאֶת־הַמַּסֵּכָ֑ה וַיֹּ֤אמֶר אֲלֵיהֶם֙ הַכֹּהֵ֔ן מָ֥ה אַתֶּ֖ם עֹשִֽׂים׃
19 ೧೯ ಅವರು ಅವನಿಗೆ, “ಸುಮ್ಮನಿರು; ಬಾಯಿ ಮುಚ್ಚಿಕೊಂಡು; ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ, ಯಾಜಕನೂ ಆಗಿರು. ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಾಯೇಲ್ಯರ ಒಂದು ಕುಲಕ್ಕೂ, ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದು ಕೇಳಿದರು.
וַיֹּאמְרוּ֩ ל֨וֹ הַחֲרֵ֜שׁ שִֽׂים־יָדְךָ֤ עַל־פִּ֙יךָ֙ וְלֵ֣ךְ עִמָּ֔נוּ וֶֽהְיֵה־לָ֖נוּ לְאָ֣ב וּלְכֹהֵ֑ן הֲט֣וֹב ׀ הֱיוֹתְךָ֣ כֹהֵ֗ן לְבֵית֙ אִ֣ישׁ אֶחָ֔ד א֚וֹ הֱיוֹתְךָ֣ כֹהֵ֔ן לְשֵׁ֥בֶט וּלְמִשְׁפָּחָ֖ה בְּיִשְׂרָאֵֽל׃
20 ೨೦ ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ, ಕೆತ್ತನೆಯ ವಿಗ್ರಹವನ್ನೂ, ತೆಗೆದುಕೊಂಡು ಅವರ ಬಳಿಗೆ ಬಂದನು.
וַיִּיטַב֙ לֵ֣ב הַכֹּהֵ֔ן וַיִּקַּח֙ אֶת־הָ֣אֵפ֔וֹד וְאֶת־הַתְּרָפִ֖ים וְאֶת־הַפָּ֑סֶל וַיָּבֹ֖א בְּקֶ֥רֶב הָעָֽם׃
21 ೨೧ ತರುವಾಯ ಅವರು ತಮ್ಮ ಹೆಂಡತಿ ಮಕ್ಕಳನ್ನೂ, ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು.
וַיִּפְנ֖וּ וַיֵּלֵ֑כוּ וַיָּשִׂ֨ימוּ אֶת־הַטַּ֧ף וְאֶת־הַמִּקְנֶ֛ה וְאֶת־הַכְּבוּדָּ֖ה לִפְנֵיהֶֽם׃
22 ೨೨ ಅವರು ಮೀಕನ ಮನೆಯಿಂದ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನ್ಯರನ್ನು ಹಿಂದಟ್ಟಿ
הֵ֥מָּה הִרְחִ֖יקוּ מִבֵּ֣ית מִיכָ֑ה וְהָאֲנָשִׁ֗ים אֲשֶׁ֤ר בַּבָּתִּים֙ אֲשֶׁר֙ עִם־בֵּ֣ית מִיכָ֔ה נִֽזְעֲק֔וּ וַיַּדְבִּ֖יקוּ אֶת־בְּנֵי־ דָֽן׃
23 ೨೩ ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪನ್ನು ಕೂಡಿಸಿಕೊಂಡು ಬಂದದ್ದೇಕೆ” ಎಂದು ಕೇಳಲು
וַֽיִּקְרְאוּ֙ אֶל־בְּנֵי ־דָ֔ן וַיַּסֵּ֖בּוּ פְּנֵיהֶ֑ם וַיֹּאמְר֣וּ לְמִיכָ֔ה מַה־לְּךָ֖ כִּ֥י נִזְעָֽקְתָּ׃
24 ೨೪ ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.
וַיֹּ֡אמֶר אֶת־אֱלֹהַי֩ אֲשֶׁר־עָשִׂ֨יתִי לְקַחְתֶּ֧ם וְֽאֶת־הַכֹּהֵ֛ן וַתֵּלְכ֖וּ וּמַה־לִּ֣י ע֑וֹד וּמַה־זֶּ֛ה תֹּאמְר֥וּ אֵלַ֖י מַה־לָּֽךְ׃
25 ೨೫ ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ತುಂಬಾ ಕೋಪಿಸಿಕೊಳ್ಳುವವರಿದ್ದಾರೆ; ಅವರು ನಿಮ್ಮ ಮೇಲೆ ಬಿದ್ದರೆ ನೀನೂ, ನಿನ್ನ ಮನೆಯವರೂ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ. ಆದ್ದರಿಂದ ಬಾಯಿಮುಚ್ಚಿಕೊಂಡು ಹೋಗು” ಎಂದು ಹೇಳಿ ಮುಂದೆ ನಡೆದರು.
וַיֹּאמְר֤וּ אֵלָיו֙ בְּנֵי־דָ֔ן אַל־תַּשְׁמַ֥ע קוֹלְךָ֖ עִמָּ֑נוּ פֶּֽן־יִפְגְּע֣וּ בָכֶ֗ם אֲנָשִׁים֙ מָ֣רֵי נֶ֔פֶשׁ וְאָסַפְתָּ֥ה נַפְשְׁךָ֖ וְנֶ֥פֶשׁ בֵּיתֶֽךָ׃
26 ೨೬ ಅವರು ತನಗಿಂತ ಬಲಿಷ್ಠರೆಂದು ತಿಳಿದುಕೊಂಡು ಮೀಕನು ಹಿಂದಿರುಗಿ ಮನೆಗೆ ಹೋದನು.
וַיֵּלְכ֥וּ בְנֵי־דָ֖ן לְדַרְכָּ֑ם וַיַּ֣רְא מִיכָ֗ה כִּי־חֲזָקִ֥ים הֵ֙מָּה֙ מִמֶּ֔נּוּ וַיִּ֖פֶן וַיָּ֥שָׁב אֶל־בֵּיתֽוֹ׃
27 ೨೭ ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು ಲಯಿಷಿಗೆ ಹೋಗಿ ಸುಖದಿಂದಲೂ, ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು, ಅವರನ್ನು ಕತ್ತಿಯಿಂದ ಸಂಹರಿಸಿ, ಅವರ ಪಟ್ಟಣವನ್ನು ಸುಟ್ಟುಬಿಟ್ಟರು.
וְהֵ֨מָּה לָקְח֜וּ אֵ֧ת אֲשֶׁר־עָשָׂ֣ה מִיכָ֗ה וְֽאֶת־הַכֹּהֵן֮ אֲשֶׁ֣ר הָיָה־לוֹ֒ וַיָּבֹ֣אוּ עַל־לַ֗יִשׁ עַל־עַם֙ שֹׁקֵ֣ט וּבֹטֵ֔חַ וַיַּכּ֥וּ אוֹתָ֖ם לְפִי־חָ֑רֶב וְאֶת־הָעִ֖יר שָׂרְפ֥וּ בָאֵֽשׁ׃
28 ೨೮ ಆ ಪಟ್ಟಣವು ಚೀದೋನಿಗೆ ದೂರವಾಗಿದ್ದುದರಿಂದಲೂ, ಸಮೀಪದಲ್ಲಿ ಪರಿಚಯಸ್ಥರು ಯಾರು ಇಲ್ಲದೆ ಇದ್ದುದರಿಂದಲೂ, ಅವರಿಗೆ ಸಹಾಯದೊರಕಲಿಲ್ಲ. ಬೇತ್‌ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.
וְאֵ֨ין מַצִּ֜יל כִּ֧י רְֽחוֹקָה־הִ֣יא מִצִּיד֗וֹן וְדָבָ֤ר אֵין־לָהֶם֙ עִם־אָדָ֔ם וְהִ֕יא בָּעֵ֖מֶק אֲשֶׁ֣ר לְבֵית־רְח֑וֹב וַיִּבְנ֥וּ אֶת־הָעִ֖יר וַיֵּ֥שְׁבוּ בָֽהּ׃
29 ೨೯ ಮೊದಲು ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ದಾನ್ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲಪುರುಷನೂ ಇಸ್ರಾಯೇಲನ ಮಗನೂ ಆದ ದಾನನ ಹೆಸರು.
וַיִּקְרְא֤וּ שֵׁם־הָעִיר֙ דָּ֔ן בְּשֵׁם֙ דָּ֣ן אֲבִיהֶ֔ם אֲשֶׁ֥ר יוּלַּ֖ד לְיִשְׂרָאֵ֑ל וְאוּלָ֛ם לַ֥יִשׁ שֵׁם־הָעִ֖יר לָרִאשֹׁנָֽה׃
30 ೩೦ ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಾಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.
וַיָּקִ֧ימוּ לָהֶ֛ם בְּנֵי־דָ֖ן אֶת־הַפָּ֑סֶל וִ֠יהוֹנָתָן בֶּן־גֵּרְשֹׁ֨ם בֶּן־מְנַשֶּׁ֜ה ה֣וּא וּבָנָ֗יו הָי֤וּ כֹהֲנִים֙ לְשֵׁ֣בֶט הַדָּנִ֔י עַד־י֖וֹם גְּל֥וֹת הָאָֽרֶץ׃
31 ೩೧ ಶೀಲೋವಿನಲ್ಲಿ ದೇವದರ್ಶನ ಗುಡಾರವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.
וַיָּשִׂ֣ימוּ לָהֶ֔ם אֶת־פֶּ֥סֶל מִיכָ֖ה אֲשֶׁ֣ר עָשָׂ֑ה כָּל־יְמֵ֛י הֱי֥וֹת בֵּית־הָאֱלֹהִ֖ים בְּשִׁלֹֽה׃ פ

< ನ್ಯಾಯಸ್ಥಾಪಕರು 18 >