< ಮತ್ತಾಯನು 22 >

1 ಯೇಸು ಪುನಃ ಅವರ ಸಂಗಡ ಮಾತನಾಡುತ್ತಾ ಸಾಮ್ಯರೂಪವಾಗಿ ಅವರಿಗೆ ಹೇಳಿದ್ದೇನೆಂದರೆ,
Jezus pa je odgovoril in jim ponovno govoril v prispodobah ter rekel:
2 “ಪರಲೋಕ ರಾಜ್ಯವು ತನ್ನ ಮಗನ ಮದುವೆಯ ಔತಣವನ್ನು ಏರ್ಪಡಿಸಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.
»Nebeško kraljestvo je podobno nekemu kralju, ki je pripravil svatbo svojemu sinu
3 ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಆಳುಗಳನ್ನು ಕಳುಹಿಸಿದನು, ಆದರೆ ಬರುವುದಕ್ಕೆ ಅವರಿಗೆ ಮನಸ್ಸಿರಲಿಲ್ಲ.
in poslal je svoje služabnike, da pokličejo na poroko te, ki so bili povabljeni, pa oni niso hoteli priti.
4 ಅರಸನು ತಿರುಗಿ ಬೇರೆ ಆಳುಗಳನ್ನು ಕರೆದು, ‘ನೀವು ಊಟಕ್ಕೆ ಆಹ್ವಾನಿತರ ಬಳಿಗೆ ಹೋಗಿ ಇಗೋ, ಔತಣ ಸಿದ್ಧವಾಗಿದೆ; ನನ್ನ ಎತ್ತುಗಳನ್ನೂ, ಕೊಬ್ಬಿದ ಹೋರಿಗಳನ್ನೂ ವಧಿಸಿದ್ದೇನೆ; ಎಲ್ಲಾ ಸಿದ್ಧವಾಗಿದೆ; ಮದುವೆಯ ಔತಣಕ್ಕೆ ಬನ್ನಿರಿ’ ಎಂಬುದಾಗಿ ಅವರಿಗೆ ಹೇಳಿರೆಂದು ಅಪ್ಪಣೆ ಕೊಟ್ಟು ಕಳುಹಿಸಿದನು.
Ponovno pošlje druge služabnike, rekoč: ›Povejte tem, ki so povabljeni: ›Glejte, pripravil sem svojo večerjo. Moji voli in moji pitanci so zaklani in vse stvari so pripravljene. Pridite na svatbo.‹‹
5 ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;
Toda to so jemali na lahko in odšli [po] svojih poteh, en k svoji kmetiji, drugi k svojemu trgovanju,
6 ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.
preostali pa so prijeli njegove služabnike in [z njimi] hudobno ravnali ter jih usmrtili.
7 ಅರಸನು ಅದನ್ನು ಕೇಳಿ, ಸಿಟ್ಟುಗೊಂಡು, ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
Toda ko je kralj slišal o tem, je bil ogorčen. In poslal je svoje vojske in uničil te morilce ter požgal njihovo mesto.
8 ಆಗ ತನ್ನ ಆಳುಗಳಿಗೆ, ‘ಮದುವೆಯ ಔತಣವು ಸಿದ್ಧವಾಗಿದೆ ಸರಿ, ಆದರೆ ಆಹ್ವಾನಿತರು ಯೋಗ್ಯರಾಗಿರಲಿಲ್ಲ.
Potem reče svojim služabnikom: ›Poroka je pripravljena, toda tisti, ki so bili povabljeni, niso bili vredni.‹
9 ಆದುದರಿಂದ ನೀವು ಈಗ ಮುಖ್ಯರಸ್ತೆಗೆ ಹೋಗಿ ಕಂಡ ಕಂಡವರನ್ನೆಲ್ಲಾ ಮದುವೆಯ ಔತಣಕ್ಕೆ ಕರೆಯಿರಿ’ ಎಂದು ಹೇಳಿದನು.
Pojdite torej na glavne ceste in toliko, kolikor jih najdete, jih povabite na svatbo.
10 ೧೦ ಆ ಆಳುಗಳು ಮುಖ್ಯರಸ್ತೆಗಳಿಗೆ ಹೋಗಿ ಕೆಟ್ಟವರು ಒಳ್ಳೆಯವರೆನ್ನದೇ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುಕೊಂಡು ಬಂದರು. ಹೀಗೆ ಮದುವೆಯ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.
Tako so ti služabniki odšli ven na glavne ceste in zbrali skupaj vse, tako veliko, kot so jih našli, tako hudobne kakor dobre, in poroka je bila napolnjena z gosti.
11 ೧೧ ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,
In ko je kralj vstopil, da vidi goste, je zagledal tam človeka, ki ni imel nadete poročne obleke
12 ೧೨ ಅವನಿಗೆ ‘ಸ್ನೇಹಿತನೇ, ಮದುವೆಯ ಬಟ್ಟೆ ಇಲ್ಲದೆ ನೀನಿಲ್ಲಿ ಹೇಗೆ ಒಳಕ್ಕೆ ಬಂದೆ?’ ಎಂದು ಕೇಳಲು ಅವನು ಮೌನವಾಗಿದ್ದನು.
in mu reče: ›Prijatelj, kako si prišel sèm, ne da bi imel poročno obleko?‹ Ta pa je bil brez besed.
13 ೧೩ ಆಗ ಅರಸನು ಸೇವಕರಿಗೆ, ‘ಅವನ ಕೈಕಾಲು ಕಟ್ಟಿ ಅವನನ್ನು ಹೊರಗೆ ಕತ್ತಲೆಗೆ ನೂಕಿರಿ ಎಂದು ಹೇಳಿದನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.’
Tedaj je kralj rekel služabnikom: ›Zvežite mu roko in stopalo ter ga odvedite proč in ga vrzite v zunanjo temo. Tam bo jokanje in škripanje z zobmi.‹
14 ೧೪ ಹೀಗೆ ಕರೆಯಲ್ಪಟ್ಟವರು ಬಹು ಜನ, ಆರಿಸಲ್ಪಟ್ಟವರು ಸ್ವಲ್ಪ ಜನ” ಅಂದನು.
Kajti mnogo je poklicanih, toda malo je izbranih.«
15 ೧೫ ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು
Tedaj so farizeji odšli in se posvetovali, kako bi ga lahko ujeli v njegovem govorjenju.
16 ೧೬ ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
In k njemu so poslali svoje učence s herodovci, rekoč: »›Učitelj, vemo, da si pošten in v resnici učiš Božjo pot niti se ne oziraš na nobenega človeka, kajti ne oziraš se na zunanjost ljudi.‹
17 ೧೭ ಹೀಗಿರಲಾಗಿ ಕೈಸರನಿಗೆ ಸುಂಕ ಕೊಡುವುದು ನಿಯಮ ಬದ್ಧವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು” ಅಂದರು.
Povej nam torej: ›Kaj misliš? Ali je zakonito dajati cesarju davek ali ne?‹«
18 ೧೮ ಯೇಸು ಅವರ ಕೆಡುಕನ್ನು ಅರಿತುಕೊಂಡವನಾಗಿ, “ಕಪಟಿಗಳೇ, ನನ್ನನ್ನು ಏಕೆ ಪರೀಕ್ಷೆಮಾಡುತ್ತೀರಿ?
Toda Jezus je zaznal njihovo zlobnost in rekel: »Zakaj me skušate, vi hinavci?
19 ೧೯ ಸುಂಕಕ್ಕೆ ಕೊಡುವ ನಾಣ್ಯವನ್ನು ನನಗೆ ತೋರಿಸಿರಿ” ಅನ್ನಲು ಅವರು ಆತನಿಗೆ ಒಂದು ನಾಣ್ಯವನ್ನು ತಂದು ಕೊಟ್ಟರು.
Pokažite mi davčni denar.« In prinesli so mu denar.
20 ೨೦ ಆತನು, “ಈ ಸ್ವರೂಪವು ಈ ಮುದ್ರೆಯೂ ಯಾರದು?” ಎಂದು ಕೇಳಿದ್ದಕ್ಕೆ
In reče jim: »Čigava sta ta podoba in napis?«
21 ೨೧ ಅವರು, “ಕೈಸರನದು” ಅಂದರು. ಆಗ ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
Rečejo mu: »Cesarjeva.« Tedaj jim reče: »Povrnite torej cesarju stvari, ki so cesarjeve, in Bogu stvari, ki so Božje.«
22 ೨೨ ಅವರು ಈ ಮಾತನ್ನು ಕೇಳಿ ಆಶ್ಚರ್ಯಪಟ್ಟು ಆತನನ್ನು ಬಿಟ್ಟು ಹೋದರು.
Ko so slišali te besede, so se čudili in ga pustili ter odšli svojo pot.
23 ೨೩ ಅದೇ ದಿನದಲ್ಲಿ ಪುನರುತ್ಥಾನವಿಲ್ಲ ಎಂದು ವಾದಿಸುವ ಕೆಲವು ಸದ್ದುಕಾಯರು ಆತನ ಬಳಿಗೆ ಬಂದರು.
Isti dan so prišli k njemu saduceji, ki pravijo, da ni vstajenja in ga vprašali,
24 ೨೪ ಇವರು ಆತನಿಗೆ, “ಬೋಧಕನೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಮಕ್ಕಳನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.’
rekoč: »Učitelj, Mojzes je rekel: ›Če mož umre brez otrok, naj njegov brat poroči njegovo ženo in svojemu bratu obudi seme.‹
25 ೨೫ ಆದರೆ ನಮ್ಮಲ್ಲಿ ಏಳು ಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆ ಆಗಿ ತೀರಿಹೋದನು. ಅವನಿಗೆ ಮಕ್ಕಳಿಲ್ಲದ ಕಾರಣ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು;
Torej z nami je bilo sedem bratov in ko je prvi poročil ženo, je umrl in ker ni imel otrok, je svojo ženo zapustil svojemu bratu.
26 ೨೬ ಅದರಂತೆ ಎರಡನೆಯವನೂ ಮೂರನೆಯವನೂ ಹಾಗೆಯೇ ಏಳನೆಯವನ ವರೆಗೂ ಮಾಡಿದರು.
Podobno tudi drugi in tretji, do sedmega.
27 ೨೭ ಅವರೆಲ್ಲರು ಸತ್ತ ಮೇಲೆ ಆ ಹೆಂಗಸೂ ಸತ್ತಳು.
In zadnja od vseh je umrla tudi ženska.
28 ೨೮ ಹಾಗಾದರೆ ಪುನರುತ್ಥಾನದಲ್ಲಿ ಆಕೆ ಆ ಏಳು ಮಂದಿಯಲ್ಲಿ ಯಾರಿಗೆ ಹೆಂಡತಿಯಾಗಿರುವಳು? ಆಕೆಯನ್ನು ಅವರೆಲ್ಲರೂ ಮದುವೆಮಾಡಿಕೊಂಡಿದ್ದರಲ್ಲಾ” ಎಂದು ಪ್ರಶ್ನಿಸಿದರು.
Čigava žena, od teh sedmih, bo torej ob vstajenju? Kajti vsi so jo imeli.«
29 ೨೯ ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ನೀವು ದೇವರ ವಾಕ್ಯವನ್ನಾದರೂ ದೇವರ ಶಕ್ತಿಯನ್ನಾದರೂ ಸರಿಯಾಗಿ ತಿಳಿದುಕೊಳ್ಳದೆ ತಪ್ಪು ಅಭಿಪ್ರಾಯದಲ್ಲಿದ್ದೀರಿ;
Jezus jim je odgovoril in rekel: »Motite se, ker ne poznate ne pisem niti ne Božje moči.
30 ೩೦ ಪುನರುತ್ಥಾನವಾದ ಮೇಲೆ ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ; ಪರಲೋಕದಲ್ಲಿರುವ ದೇವದೂತರಂತೆ ಅವರು ಇರುತ್ತಾರೆ.
Kajti ob vstajenju se niti ne poročajo niti niso dane v zakon, temveč so kakor Božji angeli v nebesih.
31 ೩೧ ಸತ್ತವರ ಪುನರುತ್ಥಾನದ ವಿಷಯವಾಗಿ ಹೇಳಬೇಕಾದರೆ,
Toda kar se tiče vstajenja mrtvih, kaj niste brali tega, kar vam je bilo rečeno od Boga, rekoč:
32 ೩೨ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.
›Jaz sem Bog Abrahamov in Bog Izakov in Bog Jakobov‹? Bog ni Bog mrtvih, temveč živih.«
33 ೩೩ ಜನರ ಗುಂಪು ಅದನ್ನು ಕೇಳಿ ಆತನ ಬೋಧನೆಗೆ ಆಶ್ಚರ್ಯಪಟ್ಟರು.
In ko je množica to slišala, je bila osupla nad tem naukom.
34 ೩೪ ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.
Toda ko so farizeji slišali, da je utišal saduceje, so se zbrali skupaj.
35 ೩೫ ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು,
Potem mu je eden izmed njih, ki je bil izvedenec v postavi, zastavil vprašanje, ter ga skušal in rekel:
36 ೩೬ “ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ
»Učitelj, katera je največja zapoved v postavi?«
37 ೩೭ ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
Jezus mu je rekel: »›Ljubil boš Gospoda, svojega Boga, z vsem svojim srcem in z vso svojo dušo in z vsem svojim mišljenjem.‹
38 ೩೮ ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು.
To je prva in velika zapoved.
39 ೩೯ ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
Druga pa ji je podobna: ›Svojega bližnjega boš ljubil kakor samega sebe.‹
40 ೪೦ ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.
Na teh dveh zapovedih visita vsa postava in preroki.«
41 ೪೧ ಫರಿಸಾಯರು ಕೂಡಿಬಂದಿರಲಾಗಿ ಯೇಸು ಅವರಿಗೆ,
Medtem ko so bili farizeji zbrani skupaj, jih je Jezus vprašal,
42 ೪೨ “ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?” ಎಂದು ಕೇಳಿದ್ದಕ್ಕೆ
rekoč: »Kaj mislite o Kristusu? Čigav sin je?« Rečejo mu: ›Davidov Sin.‹
43 ೪೩ ಅವರು ಆತನಿಗೆ, “ದಾವೀದನ ಮಗನು” ಎಂದು ಹೇಳಿದರು. ಅದಕ್ಕೆ ಆತನು, “ಹಾಗಾದರೆ, ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಆತನನ್ನು ಕರ್ತನು ಎಂದು ಕರೆದಿದ್ದಾನಲ್ಲಾ, ಅದು ಹೇಗೆ?
Reče jim: »Kako mu torej David v duhu reče Gospod, rekoč:
44 ೪೪ “‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು’ ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು.
› Gospod je rekel mojemu Gospodu: ›Sédi na mojo desnico, dokler ne storim tvojih sovražnikov za tvojo pručko?‹‹
45 ೪೫ ಈ ಮಾತಿನಲ್ಲಿ ದಾವೀದನೇ ಆತನನ್ನು ‘ಕರ್ತನೆಂದು’ ಕರೆದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಅಂದನು.
Če ga torej David imenuje Gospod, kako je njegov sin?«
46 ೪೬ ಅದಕ್ಕೆ ಉತ್ತರವಾಗಿ ಯಾರೂ ಒಂದು ಮಾತನ್ನಾದರೂ ಆತನಿಗೆ ಹೇಳಲಾರದೆ ಹೋದರು. ಇದಲ್ಲದೆ ಅಂದಿನಿಂದ ಆತನನ್ನು ಪ್ರಶ್ನಿಸಲು ಯಾರೂ ಧೈರ್ಯಪಡಲಿಲ್ಲ.
In noben človek mu ni bil zmožen odgovoriti besede niti se mu noben človek od tega dne dalje ni drznil zastaviti še več vprašanj.

< ಮತ್ತಾಯನು 22 >