< ನಹೂಮನು 2 >

1 ನಿನವೆಯೇ, ನಿನ್ನನ್ನು ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ರಕ್ಷಿಸಲು ಸಿದ್ಧನಾಗು. ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.
尼尼微啊,那打碎邦國的上來攻擊你。 你要看守保障,謹防道路, 使腰強壯,大大勉力。 (
2 ಆಹಾ, ಯೆಹೋವನು ಯಾಕೋಬಿನ ಅತಿಶಯವನ್ನು, ಇಸ್ರಾಯೇಲಿನ ಅತಿಶಯದಂತೆ ಪುನರುಜ್ಜೀವನಗೋಳಿಸುವನು; ಕೊಳ್ಳೆಹೊಡೆಯುವವರು ಆ ಅತಿಶಯವನ್ನು ಸೂರೆಗೈದು ಅವುಗಳ ದ್ರಾಕ್ಷಾಲತೆಗಳನ್ನು ಹಾಳುಮಾಡಿದ್ದಾರೆ.
耶和華復興雅各的榮華, 好像以色列的榮華一樣; 因為使地空虛的, 已經使雅各和以色列空虛, 將他們的葡萄枝毀壞了。)
3 ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ.
他勇士的盾牌是紅的, 精兵都穿朱紅衣服。 在他預備爭戰的日子, 戰車上的鋼鐵閃爍如火, 柏木把的槍也掄起來了。
4 ಪಟ್ಟಣದ ಹೊರಗೆ ರಥಗಳು ರಭಸದಿಂದ ತಿರುಗಾಡುತ್ತವೆ, ಮೈದಾನಗಳಲ್ಲಿ ಧಡಧಡ ಓಡಾಡುತ್ತವೆ; ಪಂಜುಗಳಂತೆ ಬೆಳಗುತ್ತವೆ, ಮಿಂಚುಗಳ ಹಾಗೆ ಹಾರುತ್ತವೆ.
車輛在街上急行, 在寬闊處奔來奔去, 形狀如火把, 飛跑如閃電。
5 ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.
尼尼微王招聚他的貴冑; 他們步行絆跌, 速上城牆,預備擋牌。
6 ನದಿ ದ್ವಾರಗಳು ತೆರೆಯಲ್ಪಟ್ಟಿವೆ; ಅರಮನೆಯ ಗೋಡೆ ಕುಸಿದುಬಿದ್ದಿದೆ.
河閘開放,宮殿沖沒。
7 ವಸ್ತ್ರವನ್ನು ಕಿತ್ತು ರಾಣಿಯನ್ನು ಬಯಲಿಗೆ ತರಲು ಆಕೆಯ ಸೇವಕಿಯರು ಎದೆ ಬಡೆದುಕೊಂಡು ಪಾರಿವಾಳಗಳಂತೆ ರೋದಿಸುತ್ತಾರೆ.
王后蒙羞,被人擄去; 宮女搥胸,哀鳴如鴿。 此乃命定之事。
8 ಪುರಾತನ ಕಾಲದಿಂದ ನಿನವೆ ಪಟ್ಟಣವೂ ಕಟ್ಟೆ ಒಡೆದು ನೀರು ತುಂಬಿದ ಕೆರೆಯಂತೆ ಇದೆ. ಆಹಾ! ಹರಿದು ಓಡುವ ನೀರಿನಂತೆ ಅದರ ನಿವಾಸಿಗಳು ಓಡಿಹೋಗುತ್ತಾರೆ; ನಿಲ್ಲಿರಿ, ನಿಲ್ಲಿರಿ ಎಂದು ಅಪ್ಪಣೆಯಾದರೂ ಯಾರೂ ಹಿಂದೆ ನೋಡರು.
尼尼微自古以來充滿人民, 如同聚水的池子; 現在居民卻都逃跑。 雖有人呼喊說:站住!站住! 卻無人回顧。
9 ಬೆಳ್ಳಿಯನ್ನು ಸೂರೆಮಾಡಿರಿ, ಬಂಗಾರವನ್ನು ಕೊಳ್ಳೆ ಹೊಡೆಯಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠವಸ್ತುಗಳ ನಿಧಿಗೂ ಮಿತಿಯೇ ಇಲ್ಲ.
你們搶掠金銀吧! 因為所積蓄的無窮, 華美的寶器無數。
10 ೧೦ ನಿನವೆಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ಕರಗಿ ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.
尼尼微現在空虛荒涼, 人心消化,雙膝相碰, 腰都疼痛,臉都變色。
11 ೧೧ ಮೃಗರಾಜರ ಪ್ರಾಯದ ಸಿಂಹಗಳ ಗವಿ ಎಲ್ಲಿ? ಸಿಂಹ, ಸಿಂಹಿಣಿ, ಸಿಂಹದ ಮರಿ ಇವುಗಳು ಯಾರಿಗೂ ಹೆದರದೆ ತಿರುಗುತ್ತಿದ್ದ ಸ್ಥಳವೆಲ್ಲಿ?
獅子的洞和少壯獅子餵養之處在哪裏呢? 公獅母獅小獅遊行、無人驚嚇之地在哪裏呢?
12 ೧೨ ಅಲ್ಲಿ ಸಿಂಹವು ತನ್ನ ಮರಿಗಳಿಗಾಗಿ ಬೇಕಾದಷ್ಟು ಬೇಟೆಯನ್ನು ಸೀಳುತ್ತಿತ್ತು, ತನ್ನ ಸಿಂಹಿಣಿಗಳಿಗಾಗಿ ಮೃಗಗಳ ಕುತ್ತಿಗೆಯನ್ನು ಸೀಳುತಿತ್ತು; ತನ್ನ ಗವಿಗಳನ್ನು ಬೇಟೆಯಿಂದಲೂ ತನ್ನ ಗುಹೆಯನ್ನು ಕೊಂದ ಮೃಗಗಳಿಂದಲೂ ತುಂಬಿಸಿತು.
公獅為小獅撕碎許多食物, 為母獅掐死活物, 把撕碎的、掐死的充滿牠的洞穴。
13 ೧೩ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ! ನಾನು ನಿನಗೆ ವಿರುದ್ಧನಾಗಿದ್ದೇನೆ, ನಿನ್ನ ರಥಗಳನ್ನು ಸುಟ್ಟು ಹೊಗೆಹಾಯಿಸುವೆನು, ಕತ್ತಿಯು ನಿನ್ನ ಪ್ರಾಯದ ಸಿಂಹಗಳನ್ನು ಸೀಳಿ ನುಂಗಿ ಬಿಡುವವು; ನಿನಗೆ ಸಿಕ್ಕಿದ ಬೇಟೆಯನ್ನು ಲೋಕದೊಳಗಿಂದ ನಿರ್ಮೂಲಮಾಡುವೆನು; ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸುವುದಿಲ್ಲ.”
萬軍之耶和華說:「我與你為敵,必將你的車輛焚燒成煙,刀劍也必吞滅你的少壯獅子。我必從地上除滅你所撕碎的,你使者的聲音必不再聽見。」

< ನಹೂಮನು 2 >