< ಕೀರ್ತನೆಗಳು 120 >

1 ಯಾತ್ರಾಗೀತೆ. ನನ್ನ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.
Canticum graduum. Ad Dominum cum tribularer clamavi: et exaudivit me.
2 ಯೆಹೋವನೇ, ಸುಳ್ಳು ಬಾಯಿಯೂ, ವಂಚಿಸುವ ನಾಲಿಗೆ ಉಳ್ಳವರಿಂದ ನನ್ನನ್ನು ಬಿಡಿಸು.
Domine libera animam meam a labiis iniquis, et a lingua dolosa.
3 ವಂಚಿಸುವ ನಾಲಿಗೆಯೇ, ದೇವರು ನಿನಗೇನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?
Quid detur tibi, aut quid apponatur tibi ad linguam dolosam?
4 ಶೂರನ ಹದವಾದ ಬಾಣಗಳನ್ನೂ, ಜಾಲಿಯ ಕೆಂಡಗಳನ್ನೂ ನಿನಗೆ ಕೊಡುವರು.
Sagittae potentis acutae, cum carbonibus desolatoriis.
5 ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!
Heu mihi, quia incolatus meus prolongatus est: habitavi cum habitantibus Cedar:
6 ಸಮಾಧಾನವನ್ನು ದ್ವೇಷಿಸುವವರೊಳಗೆ, ಇದ್ದು ಇದ್ದು ಸಾಕಾಯಿತು.
multum incola fuit anima mea.
7 ನಾನು ಸಮಾಧಾನಪ್ರಿಯನು; ಅವರೋ, ನಾನು ಮಾತನಾಡಿದರೆ ಯುದ್ಧಕ್ಕೆ ಬರುತ್ತಾರೆ.
Cum his, qui oderunt pacem, eram pacificus: cum loquebar illis, impugnabant me gratis.

< ಕೀರ್ತನೆಗಳು 120 >