< ಕೀರ್ತನೆಗಳು 32 >

1 ದಾವೀದನ ಪದ್ಯ. ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.
[A Psalm] of instruction by David. Blessed [are they] whose transgressions are forgiven, and who sins are covered.
2 ಯೆಹೋವನು ಯಾರ ಲೆಕ್ಕಕ್ಕೆ ಅಪರಾಧವನ್ನು ಎಣಿಸುವುದಿಲ್ಲವೋ? ಯಾರ ಹೃದಯದಲ್ಲಿ ಕಪಟವಿರುವುದಿಲ್ಲವೋ ಅವನು ಧನ್ಯನು.
Blessed is the man to whom the Lord will not impute sin, and whose mouth there is no guile.
3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.
Because I kept silence, my bones waxed old, from my crying all the day.
4 ಹಗಲಿರುಳು ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿತ್ತು; ನನ್ನ ಶರೀರದ ಸಾರವೆಲ್ಲಾ ಬೇಸಿಗೆಯ ನೀರಿನಂತೆ ಬತ್ತಿಹೋಯಿತು. (ಸೆಲಾ)
For day and night thy hand was heavy upon me: I became thoroughly miserable while a thorn was fastened in [me]. (Pause)
5 ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. (ಸೆಲಾ)
I acknowledged my sin, and hid not mine iniquity: I said, I will confess mine iniquity to the Lord against myself; and thou forgavest the ungodliness of my heart. (Pause)
6 ಆದುದರಿಂದ ಭಕ್ತರೆಲ್ಲರು ಅಗತ್ಯಕಾಲದಲ್ಲಿ ನಿನ್ನನ್ನು ಪ್ರಾರ್ಥಿಸಲಿ; ಆಗ ಮಹಾಪ್ರವಾಹವು ಅಂಥವರನ್ನು ಮುಟ್ಟುವುದೇ ಇಲ್ಲ.
Therefore shall every holy one pray to thee in a fit time: only in the deluge of many waters they shall not come nigh to him.
7 ನೀನೇ ನನಗೆ ಮರೆಯು; ನಿರಪಾಯವಾಗಿ ನನ್ನನ್ನು ಕಾಯುವಿ; ವಿಮೋಚನಧ್ವನಿಯಿಂದ ನನ್ನನ್ನು ಆವರಿಸಿಕೊಳ್ಳುತ್ತೀ. (ಸೆಲಾ)
Thou art my refuge from the affliction that encompasses me; my joy, to deliver me from them that have compassed me. (Pause)
8 ಯೆಹೋವನು, “ನಿನ್ನನ್ನು ಉಪದೇಶಿಸಿ ನಡೆಯಬೇಕಾದ ಮಾರ್ಗವನ್ನು ತಿಳಿಸುವೆನು; ನಿನ್ನನ್ನು ಕಟಾಕ್ಷಿಸಿ ಆಲೋಚನೆ ಹೇಳುವೆನು” ಎಂದು ಅನ್ನುತ್ತಾನಲ್ಲಾ.
I will instruct thee and guide thee in this way wherein thou shalt go: I will fix mine eyes upon thee.
9 ಆದುದರಿಂದ ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಅಥವಾ ಹೇಸರಗತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರು ಕಡಿವಾಣಗಳಿಲ್ಲದೆ ಸ್ವಾಧೀನವಾಗುವುದಿಲ್ಲ.
Be ye not as horse and mule, which have no understanding; [but thou must] constrain their jaws with bit and curb, lest they should come nigh to thee.
10 ೧೦ ದುಷ್ಟರಿಗೆ ಅನೇಕ ಕಷ್ಟನಷ್ಟಗಳು ಉಂಟಾಗುವವು; ಆದರೆ ಯೆಹೋವನಲ್ಲಿ ಭರವಸವಿಟ್ಟವರನ್ನು ಆತನ ಕೃಪೆಯು ಆವರಿಸಿಕೊಳ್ಳುವುದು.
Many are the scourges of the sinner: but him that hopes in the Lord mercy shall compass about.
11 ೧೧ ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.
Be glad in the Lord, and exult, ye righteous: and glory, all ye that are upright in heart.

< ಕೀರ್ತನೆಗಳು 32 >