< ಕೀರ್ತನೆಗಳು 55 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಪದ್ಯ. ದೇವರೇ, ನನ್ನ ಮೊರೆಯನ್ನು ಲಾಲಿಸು; ನನ್ನ ವಿಜ್ಞಾಪನೆಗೆ ಕಿವಿಮುಚ್ಚಿಕೊಳ್ಳಬೇಡ.
神よねがはくは耳をわが祈にかたぶけたまへ わが懇求をさけて身をかくしたまふなかれ
2 ನನ್ನ ಕಡೆಗೆ ಲಕ್ಷ್ಯಕೊಟ್ಟು ಸದುತ್ತರವನ್ನು ದಯಪಾಲಿಸು.
われに聖意をとめ 我にこたへたまへ われ歎息によりてやすからず悲みうめくなり
3 ಶತ್ರುಗಳ ಅಬ್ಬರ, ದುಷ್ಟರ ಹಿಂಸೆ ಇವುಗಳ ದೆಸೆಯಿಂದ ಪ್ರಲಾಪಿಸುವವನಾಗಿ, ಹೊಯ್ದಾಡುತ್ತಾ ನರಳುತ್ತಿದ್ದೇನೆ. ಅವರು ನನ್ನ ಮೇಲೆ ಅಪಾಯವನ್ನು ಬರಮಾಡಿ, ಕೋಪದಿಂದ ನನ್ನನ್ನು ದ್ವೇಷಿಸುತ್ತಾರೆ.
これ仇のこゑと惡きものの暴虐とのゆゑなり そはかれら不義をわれに負せ いきどほりて我におひせまるなり
4 ನನ್ನ ಹೃದಯವು ನೊಂದು ಬೆಂದುಹೋಗಿದೆ; ಮರಣಭಯವು ನನ್ನನ್ನು ಆವರಿಸಿಕೊಂಡಿದೆ.
わが心わがうちに憂ひいたみ死のもろもろの恐懼わがうへにおちたり
5 ಅಂಜಿ ನಡುಗುತ್ತಿದ್ದೇನೆ; ದಿಗಿಲು ನನ್ನನ್ನು ಹಿಡಿದಿದೆ.
おそれと戰慄とわれにのぞみ甚だしき恐懼われをおほへり
6 ನಾನು, “ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯ ಸೇರಿಕೊಳ್ಳುತ್ತಿದ್ದೆನು.
われ云ねがはくは鴿のごとく羽翼のあらんことを さらば我とびさりて平安をえん
7 ಅವಸರದಿಂದ ಹಾನಿಕರವಾದ ಬಿರುಗಾಳಿಯಿಂದ ತಪ್ಪಿಸಿಕೊಂಡು,
みよ我はるかにのがれさりて野にすまん (セラ)
8 ದೂರ ಹೋಗಿ ಅರಣ್ಯಸ್ಥಳದಲ್ಲಿ ಪ್ರವಾಸಿಯಾಗಿರುತ್ತಿದ್ದೆನು” ಅಂದುಕೊಂಡೆನು. (ಸೆಲಾ)
われ速かにのがれて暴風と狂風とをはなれん
9 ಕರ್ತನೇ, ಅವರ ಭಾಷೆಯನ್ನು ತಾರುಮಾರುಮಾಡಿ ಅವರನ್ನು ಭ್ರಾಂತಿಗೊಳಿಸು. ಪಟ್ಟಣದಲ್ಲಿ ಕಲಹ, ಬಲಾತ್ಕಾರಗಳು ಕಾಣಬರುತ್ತವೆ.
われ都のうちに強暴とあらそひとをみたり 主よねがはくは彼等をほろぼしたまへ かれらの舌をわかれしめたまへ
10 ೧೦ ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.
彼等はひるもよるも石垣のうへをあるきて邑をめぐる 邑のうちには邪曲とあしき企圖とあり
11 ೧೧ ಅದರೊಳಗೆಲ್ಲಾ ನಾಶನವೇ; ದಬ್ಬಾಳಿಕೆ ಮತ್ತು ವಂಚನೆ ಅದರ ಬೀದಿಗಳಿಂದ ತೊಲಗವು.
また惡きこと邑のうちにあり しへたげと欺詐とはその街衢をはなるることなし
12 ೧೨ ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೆನು.
われを謗れるものは仇たりしものにあらず もし然りしならば尚しのばれしなるべし 我にむかひて己をたかくせし者はわれを恨たりしものにあらず若しかりしならば身をかくして彼をさけしなるべし
13 ೧೩ ಆದರೆ ನೀನು ನನಗೆ ಸ್ವಕೀಯನೂ ಆಪ್ತಮಿತ್ರನೂ ಅಲ್ಲವೇ.
されどこれ汝なり われとおなじきもの わが友われと親しきものなり
14 ೧೪ ನಾವು ಪರಸ್ಪರವಾಗಿ ರಸಭರಿತ ಸಂಭಾಷಣೆ ಮಾಡುತ್ತಾ ಭಕ್ತಸಮೂಹದೊಡನೆ ದೇವಾಲಯಕ್ಕೆ ಹೋಗುತ್ತಿದ್ದೆವಲ್ಲಾ.
われら互にしたしき語らひをなし また會衆のなかに在てともに神の家にのぼりたりき
15 ೧೫ ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ. (Sheol h7585)
死は忽然かれらにのぞみ その生るままにて陰府にくだらんことを そは惡事その住處にありその中にあればなり (Sheol h7585)
16 ೧೬ ನಾನಂತೂ ದೇವರಾದ ಯೆಹೋವನಿಗೆ ಮೊರೆಯಿಡುವೆನು; ಆತನು ನನ್ನನ್ನು ರಕ್ಷಿಸುವನು.
されど我はただ神をよばんヱホバわれを救ひたまふべし
17 ೧೭ ತ್ರಿಕಾಲದಲ್ಲಿಯೂ ಹಂಬಲಿಸುತ್ತಾ ಮೊರೆಯಿಡುವೆನು. ಆತನು ಹೇಗೂ ನನ್ನ ಮೊರೆಯನ್ನು ಕೇಳಿ
夕にあしたに晝にわれなげき且かなしみうめかん ヱホバわが聲をききたまふべし
18 ೧೮ ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.
ヱホバは我をせむる戰闘よりわが霊魂をあがなひいだして平安をえしめたまへり そはわれを攻るもの多かりければなり
19 ೧೯ ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. (ಸೆಲಾ) ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ.
太古よりいます者なる神はわが聲をききてかれらを惱めたまべし (セラ) かれらには變ることなく神をおそるることなし
20 ೨೦ ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
かの人はおのれと睦みをりしものに手をのべてその契約をけがしたり
21 ೨೧ ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
その口はなめらかにして乳酥のごとくなれどもその心はたたかひなり その言はあぶらに勝りてやはらかなれどもぬきたる劍にことならず
22 ೨೨ ನಿನ್ನ ಚಿಂತಾಭಾರವನ್ನು ಯೆಹೋವನ ಮೇಲೆ ಹಾಕು; ಆತನು ನಿನ್ನನ್ನು ಉದ್ಧಾರಮಾಡುವನು. ನೀತಿವಂತನನ್ನು ಎಂದಿಗೂ ಕದಲಗೊಡಿಸನು.
なんぢの荷をヱホバにゆだねよさらば汝をささへたまはん ただしき人のうごかさるることを常にゆるしたまふまじ
23 ೨೩ ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.
かくて神よなんぢはかれらを亡の坑におとしいれたまはん血をながすものと詭計おほきものとは生ておのが日の半にもいたらざるべし 然はあれどわれは汝によりたのまん

< ಕೀರ್ತನೆಗಳು 55 >