< ಪ್ರಕಟಣೆ 10 >

1 ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಕಾಮನಬಿಲ್ಲು ಇತ್ತು. ಅವನ ಮುಖವು ಸೂರ್ಯನೊಪಾದಿಯಲ್ಲಿತ್ತು. ಅವನ ಪಾದಗಳು ಬೆಂಕಿಯ ಕಂಬಗಳಂತಿದ್ದವು.
Tete mekpɔ mawudɔla triakɔ bubu wòtso dziƒo gbɔna. Lilikpo nye awu ʋlaya wòdo, eye anyieʋɔ le eƒe ta dzi, eƒe mo le abe ɣe ene, eye eƒe afɔwo le abe dzosɔtiwo ene.
2 ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು,
Elé agbalẽ sue aɖe ɖe asi, esi le ʋuʋu le eƒe asiƒome. Etsɔ eƒe ɖusifɔ da ɖe atsiaƒu me, tsɔ eƒe miafɔ da ɖe anyigba dzi,
3 ಸಿಂಹವು ಘರ್ಜಿಸುವ ಪ್ರಕಾರ ಮಹಾಶಬ್ದದಿಂದ ಕೂಗಿದನು. ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು.
eye wòdo ɣli sesẽ aɖe abe dzata ƒe gbeɖeɖe ene. Esi wòdo ɣlia la, dziɖegbe adreawo ƒe gbe ɖi.
4 ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ, “ಆ ಏಳು ಗುಡುಗುಗಳು ನುಡಿದಿದ್ದನ್ನು ನೀನು ಬರೆಯದೆ ಗುಪ್ತವಾಗಿಡು” ಎಂದು ಹೇಳುವ ದೈವವಾಣಿಯನ್ನು ಕೇಳಿದೆನು.
Esi dziɖegbe adreawo ƒo nu la, menɔ klalo be maŋlɔ nu, gake mese gbe aɖe tso dziƒo gblɔ nam be, “Tre nu si dziɖegbe adreawo gblɔ la nu, eye mègaŋlɔe da ɖi o.”
5 ಅನಂತರ ಸಮುದ್ರದ ಮೇಲೆಯೂ, ಭೂಮಿಯ ಮೇಲೆಯೂ ನಿಂತಿರುವವನಾಗಿ ನನಗೆ ಕಾಣಿಸಿದ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ,
Ke mawudɔla si mekpɔ wònɔ tsitre ɖe atsiaƒu me kple anyigba dzi la do eƒe ɖusibɔ ɖe dziƒo,
6 ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ, ಭೂಮಿಯನ್ನೂ ಅದರಲ್ಲಿರುವ ಸಮಸ್ತವನ್ನೂ, ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ, ಯುಗಯುಗಾಂತರಗಳಲ್ಲಿಯೂ ಜೀವಿಸುವಾತನ ಮೇಲೆ ಆಣೆಯಿಟ್ಟು, “ಇನ್ನು ತಡಮಾಡದೆ, (aiōn g165)
eye wòyɔ eya ame si nɔ agbe tegbetegbe, ame si wɔ dziƒowo kple nu siwo katã le wo me, anyigba kple nu siwo le edzi kple atsiaƒu kple nu siwo katã le eme la ƒe ŋkɔ heka atam be, “Heheɖemegbe aɖeke maganɔ anyi o! (aiōn g165)
7 ಏಳನೆಯ ದೇವದೂತನು ಶಬ್ದಮಾಡುವ ದಿನಗಳಲ್ಲಿ ಅಂದರೆ ಅವನು ತುತ್ತೂರಿಯನ್ನು ಊದುವುದಕ್ಕಿರುವ ಸಮಯದಲ್ಲಿ ದೇವರು ಇದುವರೆಗೆ ಗುಪ್ತವಾಗಿಟ್ಟಿದ್ದ ದೇವರ ಮರ್ಮವನ್ನು ತನ್ನ ದಾಸರಾದ ಪ್ರವಾದಿಗಳಿಗೆ ತಿಳಿಸಿದ್ದ ಪ್ರಕಾರ ನೆರವೇರುವುದು” ಎಂದು ಹೇಳಿದನು.
Gake le ŋkeke siwo me mawudɔla adrelia aku eƒe kpẽa la, Mawu ƒe nu ɣaɣla la ava eme abe ale si wòɖe gbeƒã na eƒe dɔla nyagblɔɖilawoe ene.”
8 ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು.
Esi gbe si mese tso dziƒo gaƒo nu nam la, egblɔ nam be, “Heyi nàxɔ agbalẽ si le ʋuʋu le mawudɔla si le tsitre ɖe atsiaƒu me kple anyigba dzi la ƒe asi me.”
9 ನಾನು ಆ ದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು ಎಂದು ಕೇಳಲು ಅವನು ನನಗೆ, ನೀನು ಅದನ್ನು ತೆಗೆದುಕೊಂಡು ತಿಂದು ಬಿಡು, ಅದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವುದು, ಆದರೆ ನಿನ್ನ ಬಾಯಿ ಜೇನಿನಂತೆ ಸಿಹಿಯಾಗಿರುವುದು” ಎಂದು ಹೇಳಿದನು.
Ale meyi ɖe mawudɔla la gbɔ, eye mebiae be wòatsɔ agbalẽ sue la nam. Egblɔ nam be, “Xɔe, eye nàɖui. Atrɔ azu nu veve le wò dɔ me, gake le wò nu me ya la, avivi abe anyitsi ene.”
10 ೧೦ ಆಗ ನಾನು ಆ ಚಿಕ್ಕ ಸುರುಳಿಯನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಅದನ್ನು ತಿಂದ ನಂತರ ನನ್ನ ಹೊಟ್ಟೆಯು ಕಹಿಯಾಯಿತು.
Mexɔ agbalẽ sue la le mawudɔla la si, eye meɖui. Evivi le nye nu me abe anyitsi ene, ke esi meɖui vɔ la, etrɔ zu nu veve le nye dɔ me.
11 ೧೧ ಅನಂತರ ಆ ದೂತನು ನನಗೆ, “ನೀನು ಇನ್ನೂ ಅನೇಕ ಪ್ರಜೆ, ಜನ, ಭಾಷೆಗಳನ್ನೂ, ಅರಸರನ್ನೂ ಕುರಿತು ಪ್ರವಾದನೆ ಹೇಳಬೇಕು” ಎಂದು ಆಜ್ಞಾಪಿಸಿದನು.
Eyi edzi gblɔ nam be, “Ele na wò be nàgagblɔ nya ɖi tso ame geɖewo, dukɔwo, gbegbɔgblɔwo kple fiawo ŋuti.”

< ಪ್ರಕಟಣೆ 10 >