< ಚೆಫನ್ಯನು 3 >

1 ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!
ה֥וֹי מֹרְאָ֖ה וְנִגְאָלָ֑ה הָעִ֖יר הַיּוֹנָֽה׃
2 ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.
לֹ֤א שָֽׁמְעָה֙ בְּק֔וֹל לֹ֥א לָקְחָ֖ה מוּסָ֑ר בַּֽיהוָה֙ לֹ֣א בָטָ֔חָה אֶל־אֱלֹהֶ֖יהָ לֹ֥א קָרֵֽבָה׃
3 ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.
שָׂרֶ֣יהָ בְקִרְבָּ֔הּ אֲרָי֖וֹת שֹֽׁאֲגִ֑ים שֹׁפְטֶ֙יהָ֙ זְאֵ֣בֵי עֶ֔רֶב לֹ֥א גָרְמ֖וּ לַבֹּֽקֶר׃
4 ಅಲ್ಲಿರುವ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರು, ವಿಶ್ವಾಸ ದ್ರೋಹಿಗಳು; ಅದರ ಯಾಜಕರು ಪವಿತ್ರಾಲಯವನ್ನು ಹೊಲೆಗೆಡಿಸಿದ್ದಾರೆ, ಧರ್ಮವಿಧಿಗಳನ್ನು ಭಂಗಮಾಡಿದ್ದಾರೆ.
נְבִיאֶ֙יהָ֙ פֹּֽחֲזִ֔ים אַנְשֵׁ֖י בֹּֽגְד֑וֹת כֹּהֲנֶ֙יהָ֙ חִלְּלוּ־קֹ֔דֶשׁ חָמְס֖וּ תּוֹרָֽה׃
5 ಅದರ ಮಧ್ಯ ನೆಲೆಗೊಂಡಿರುವ ಯೆಹೋವನು ನೀತಿಸ್ವರೂಪನು; ಎಂದಿಗೂ ಅನ್ಯಾಯವನ್ನು ಮಾಡನು; ಪ್ರತಿ ಬೆಳಿಗ್ಗೆ ತನ್ನ ನ್ಯಾಯವನ್ನು ತಪ್ಪದೆ ಪ್ರಕಾಶಗೊಳಿಸುವನು; ಅನ್ಯಾಯಗಾರನೋ ನಾಚಿಕೆಪಡುವುದಿಲ್ಲ.
יְהוָ֤ה צַדִּיק֙ בְּקִרְבָּ֔הּ לֹ֥א יַעֲשֶׂ֖ה עַוְלָ֑ה בַּבֹּ֨קֶר בַּבֹּ֜קֶר מִשְׁפָּט֨וֹ יִתֵּ֤ן לָאוֹר֙ לֹ֣א נֶעְדָּ֔ר וְלֹֽא־יוֹדֵ֥עַ עַוָּ֖ל בֹּֽשֶׁת׃
6 ಯೆಹೋವನು ಇಂತೆನ್ನುತ್ತಾನೆ, “ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೋಟೆ ಕೊತ್ತಲುಗಳು ಪಾಳು ಬಿದ್ದವು; ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ; ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಾಮವಾಗಿವೆ.
הִכְרַ֣תִּי גוֹיִ֗ם נָשַׁ֙מּוּ֙ פִּנּוֹתָ֔ם הֶחֱרַ֥בְתִּי חֽוּצוֹתָ֖ם מִבְּלִ֣י עוֹבֵ֑ר נִצְדּ֧וּ עָרֵיהֶ֛ם מִבְּלִי־אִ֖ישׁ מֵאֵ֥ין יוֹשֵֽׁב׃
7 ಇದರಿಂದ ಯೆರೂಸಲೇಮೇ, ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣಕ್ಕೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ ತಗಲದು” ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.
אָמַ֜רְתִּי אַךְ־תִּירְאִ֤י אוֹתִי֙ תִּקְחִ֣י מוּסָ֔ר וְלֹֽא־יִכָּרֵ֣ת מְעוֹנָ֔הּ כֹּ֥ל אֲשֶׁר־פָּקַ֖דְתִּי עָלֶ֑יהָ אָכֵן֙ הִשְׁכִּ֣ימוּ הִשְׁחִ֔יתוּ כֹּ֖ל עֲלִילוֹתָֽם׃
8 ಯೆಹೋವನು ಇಂತೆನ್ನುತ್ತಾನೆ, “ಹೀಗಿರಲು ನನಗಾಗಿ ಕಾದುಕೊಂಡಿರಿ, ನಾನು ಬೇಟೆಹಿಡಿಯಲಿಕ್ಕೆ ಏಳುವ ದಿನವನ್ನು ಎದುರುನೋಡಿರಿ; ಜನಾಂಗರಾಜ್ಯಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನೆಲ್ಲಾ ಹೊಯ್ದು ಬಿಡುವುದಕ್ಕಾಗಿ ಆ ಜನಾಂಗಗಳನ್ನು ಸೇರಿಸಿ ಆ ರಾಜ್ಯಗಳನ್ನು ಕೂಡಿಸಬೇಕೆಂದು ತೀರ್ಮಾನಿಸಿಕೊಂಡಿದ್ದೇನೆ, ಲೋಕವೆಲ್ಲಾ ನನ್ನ ರೋಷಾಗ್ನಿಗೆ ತುತ್ತಾಗುವುದಷ್ಟೇ.
לָכֵ֤ן חַכּוּ־לִי֙ נְאֻם־יְהוָ֔ה לְי֖וֹם קוּמִ֣י לְעַ֑ד כִּ֣י מִשְׁפָּטִי֩ לֶאֱסֹ֨ף גּוֹיִ֜ם לְקָבְצִ֣י מַמְלָכ֗וֹת לִשְׁפֹּ֨ךְ עֲלֵיהֶ֤ם זַעְמִי֙ כֹּ֚ל חֲר֣וֹן אַפִּ֔י כִּ֚י בְּאֵ֣שׁ קִנְאָתִ֔י תֵּאָכֵ֖ל כָּל־הָאָֽרֶץ׃
9 “ಆಗ ಎಲ್ಲರೂ ಒಂದೇ ಮನಸ್ಸಿನಿಂದ ಯೆಹೋವನನ್ನು ಸೇವಿಸಿ ಆತನ ಹೆಸರನ್ನೆತ್ತಿ ಪ್ರಾರ್ಥಿಸುವಂತೆ ಜನಾಂಗಗಳವರ ತುಟಿಗಳನ್ನು ಮಾರ್ಪಡಿಸಿ ಶುದ್ಧಿಮಾಡುವೆನು.
כִּֽי־אָ֛ז אֶהְפֹּ֥ךְ אֶל־עַמִּ֖ים שָׂפָ֣ה בְרוּרָ֑ה לִקְרֹ֤א כֻלָּם֙ בְּשֵׁ֣ם יְהוָ֔ה לְעָבְד֖וֹ שְׁכֶ֥ם אֶחָֽד׃
10 ೧೦ ಚದರಿಹೋಗಿರುವ ನನ್ನ ಜನರು, ನನ್ನ ಭಕ್ತರು, ಕೂಷಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದು ಸಮರ್ಪಿಸುವರು.
מֵעֵ֖בֶר לְנַֽהֲרֵי־כ֑וּשׁ עֲתָרַי֙ בַּת־פוּצַ֔י יוֹבִל֖וּן מִנְחָתִֽי׃
11 ೧೧ “ನೀನು ನನಗೆ ಮಾಡಿದ ನಾನಾ ದುಷ್ಕೃತ್ಯಗಳು ಮುಂದಿನ ಆ ಕಾಲದಲ್ಲಿ ನಿನಗೆ ನಾಚಿಕೆಗೆ ಈಡಾಗುವವು; ಆಗ ತಮ್ಮ ಅತಿಗರ್ವದಿಂದ ಮೆರೆಯುವವರನ್ನು ನಿನ್ನೊಳಗಿಂದ ತೊಲಗಿಸಿಬಿಡುವೆನು; ಅಂದಿನಿಂದ ನನ್ನ ಪವಿತ್ರಪರ್ವತದಲ್ಲಿ ಗರ್ವಪಡದೆ ಇರುವಿ.
בַּיּ֣וֹם הַה֗וּא לֹ֤א תֵב֙וֹשִׁי֙ מִכֹּ֣ל עֲלִילֹתַ֔יִךְ אֲשֶׁ֥ר פָּשַׁ֖עַתְּ בִּ֑י כִּי־אָ֣ז ׀ אָסִ֣יר מִקִּרְבֵּ֗ךְ עַלִּיזֵי֙ גַּאֲוָתֵ֔ךְ וְלֹֽא־תוֹסִ֧פִי לְגָבְהָ֛ה ע֖וֹד בְּהַ֥ר קָדְשִֽׁי׃
12 ೧೨ ದೀನದರಿದ್ರ ಜನರನ್ನು ನಿನ್ನಲ್ಲಿ ಉಳಿಸುವೆನು; ಅವರು ಯೆಹೋವನ ನಾಮವನ್ನು ಆಶ್ರಯಿಸಿಕೊಳ್ಳುವರು,
וְהִשְׁאַרְתִּ֣י בְקִרְבֵּ֔ךְ עַ֥ם עָנִ֖י וָדָ֑ל וְחָס֖וּ בְּשֵׁ֥ם יְהוָֽה׃
13 ೧೩ ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯವನ್ನು ಮಾಡರು, ಸುಳ್ಳಾಡರು; ಅವರ ಬಾಯಲ್ಲಿ ಮೋಸದ ನಾಲಿಗೆಯು ಇರದು; ಕುರಿ ಮಂದೆಯಂತೆ ಮೇದು ಮಲಗಿಕೊಳ್ಳುವರು, ಅವರನ್ನು ಯಾರೂ ಹೆದರಿಸರು.”
שְׁאֵרִ֨ית יִשְׂרָאֵ֜ל לֹֽא־יַעֲשׂ֤וּ עַוְלָה֙ וְלֹא־יְדַבְּר֣וּ כָזָ֔ב וְלֹֽא־יִמָּצֵ֥א בְּפִיהֶ֖ם לְשׁ֣וֹן תַּרְמִ֑ית כִּֽי־הֵ֛מָּה יִרְע֥וּ וְרָבְצ֖וּ וְאֵ֥ין מַחֲרִֽיד׃ ס
14 ೧೪ ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!
רָנִּי֙ בַּת־צִיּ֔וֹן הָרִ֖יעוּ יִשְׂרָאֵ֑ל שִׂמְחִ֤י וְעָלְזִי֙ בְּכָל־לֵ֔ב בַּ֖ת יְרוּשָׁלִָֽם׃
15 ೧೫ ನಿನಗೆ ವಿಧಿಸಿದ ದಂಡನೆಯನ್ನು ಯೆಹೋವನು ತಪ್ಪಿಸಿದ್ದಾನೆ, ನಿನ್ನ ಶತ್ರುವನ್ನು ತಳ್ಳಿಬಿಟ್ಟಿದ್ದಾನೆ; ಇಸ್ರಾಯೇಲಿನ ಅರಸನಾದ ಯೆಹೋವನು ನಿನ್ನ ಮಧ್ಯದಲ್ಲಿದ್ದಾನೆ; ಇನ್ನು ಕೇಡಿಗೆ ಅಂಜದಿರುವಿ.
הֵסִ֤יר יְהוָה֙ מִשְׁפָּטַ֔יִךְ פִּנָּ֖ה אֹֽיְבֵ֑ךְ מֶ֣לֶךְ יִשְׂרָאֵ֤ל ׀ יְהוָה֙ בְּקִרְבֵּ֔ךְ לֹא־תִֽירְאִ֥י רָ֖ע עֽוֹד׃
16 ೧೬ ಆ ದಿನದಲ್ಲಿ ಯೆರೂಸಲೇಮಿಗೆ, “ಚೀಯೋನೇ, ಭಯಪಡಬೇಡ, ನಿನ್ನ ಕೈಗಳು ಜೋಲುಬೀಳದಿರಲಿ;
בַּיּ֣וֹם הַה֔וּא יֵאָמֵ֥ר לִירֽוּשָׁלִַ֖ם אַל־תִּירָ֑אִי צִיּ֖וֹן אַל־יִרְפּ֥וּ יָדָֽיִךְ׃
17 ೧೭ ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.
יְהוָ֧ה אֱלֹהַ֛יִךְ בְּקִרְבֵּ֖ך גִּבּ֣וֹר יוֹשִׁ֑יעַ יָשִׂ֨ישׂ עָלַ֜יִךְ בְּשִׂמְחָ֗ה יַחֲרִישׁ֙ בְּאַ֣הֲבָת֔וֹ יָגִ֥יל עָלַ֖יִךְ בְּרִנָּֽה׃
18 ೧೮ ಅವಮಾನವು ನಮ್ಮ ಪಟ್ಟಣದ ಮೇಲೆ ಹೊರೆಯಾಗಿ ಕಾಡುತ್ತಿದೆ ಎಂದು ತಿಳಿದು ಹಬ್ಬ ಉತ್ಸವಗಳಿಗೆ ದೂರವಾಗಿ ಶೋಕಿಸುತ್ತಿರುವ ನಿನ್ನವರನ್ನು ಒಟ್ಟಿಗೆ ಬರಮಾಡುವೆನು.
נוּגֵ֧י מִמּוֹעֵ֛ד אָסַ֖פְתִּי מִמֵּ֣ךְ הָי֑וּ מַשְׂאֵ֥ת עָלֶ֖יהָ חֶרְפָּֽה׃
19 ೧೯ ಆಹಾ, ಆ ಕಾಲದಲ್ಲಿ ನಿನ್ನನ್ನು ಬಾಧಿಸುವವರಿಗೆ ತಕ್ಕದ್ದನ್ನು ಮಾಡುವೆನು; ನಿನ್ನಲ್ಲಿ ಕುಂಟುವವರನ್ನು ರಕ್ಷಿಸುವೆನು, ಚದರಿ ಹೋದವರನ್ನು ಕೂಡಿಸುವೆನು; ಅಂತು ಲೋಕದಲ್ಲೆಲ್ಲಾ ಅವಮಾನಪಟ್ಟವರಿಗೆ ಸ್ತೋತ್ರ ಕೀರ್ತನೆಗಳನ್ನು ಉಂಟುಮಾಡುವೆನು.
הִנְנִ֥י עֹשֶׂ֛ה אֶת־כָּל־מְעַנַּ֖יִךְ בָּעֵ֣ת הַהִ֑יא וְהוֹשַׁעְתִּ֣י אֶת־הַצֹּלֵעָ֗ה וְהַנִּדָּחָה֙ אֲקַבֵּ֔ץ וְשַׂמְתִּים֙ לִתְהִלָּ֣ה וּלְשֵׁ֔ם בְּכָל־הָאָ֖רֶץ בָּשְׁתָּֽם׃
20 ೨೦ ಆ ಕಾಲದಲ್ಲಿ ನಿಮ್ಮನ್ನು ಕರೆದು ತರುವೆನು, ಹೌದು, ಆ ಕಾಲದಲ್ಲಿ ನಿಮ್ಮನ್ನು ಒಟ್ಟುಗೂಡಿಸುವೆನು. ನಾನು ನಿಮ್ಮ ದುರವಸ್ಥೆಯನ್ನು ನಿಮ್ಮ ಕಣ್ಣೆದುರಿಗೇ ತಪ್ಪಿಸುವಾಗ ನಿಮ್ಮನ್ನು ಲೋಕದ ಸಕಲ ಜನಾಂಗಗಳಲ್ಲಿ ಕೀರ್ತಿ ಸ್ತೋತ್ರಗಳಿಗೆ ಗುರಿಮಾಡುವೆನು” ಇದು ಯೆಹೋವನ ನುಡಿ.
בָּעֵ֤ת הַהִיא֙ אָבִ֣יא אֶתְכֶ֔ם וּבָעֵ֖ת קַבְּצִ֣י אֶתְכֶ֑ם כִּֽי־אֶתֵּ֨ן אֶתְכֶ֜ם לְשֵׁ֣ם וְלִתְהִלָּ֗ה בְּכֹל֙ עַמֵּ֣י הָאָ֔רֶץ בְּשׁוּבִ֧י אֶת־שְׁבוּתֵיכֶ֛ם לְעֵינֵיכֶ֖ם אָמַ֥ר יְהוָֽה׃

< ಚೆಫನ್ಯನು 3 >