< لاویان 15 >

و خداوند موسی و هارون را خطاب کرده، گفت: ۱ 1
ಯೆಹೋವನು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ,
«بنی‌اسرائیل را خطاب کرده، به ایشان بگویید: مردی که جریان از بدن خود دارد او به‌سبب جریانش نجس است. ۲ 2
“ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.
واین است نجاستش، به‌سبب جریان او، خواه جریانش از گوشتش روان باشد خواه جریانش ازگوشتش بسته باشد. این نجاست اوست. ۳ 3
ಆ ಸ್ರಾವವು ಹರಿಯುತ್ತಿದ್ದರು ಅಥವಾ ನಿಂತುಹೋಗಿದ್ದರು ಆ ದೇಹಸ್ಥಿತಿಯಿಂದ ಅವನು ಅಶುದ್ಧನು.
هربستری که صاحب جریان بر آن بخوابد نجس است، و هر‌چه بر آن بنشیند نجس است. ۴ 4
ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಮತ್ತು ಕುಳಿತಿರುವ ಪ್ರತಿಯೊಂದು ಆಸನವೂ ಅಶುದ್ಧವು.
و هرکه بستر او را لمس نماید، رخت خود را بشوید، وبه آب غسل کند، و تا شام نجس باشد. ۵ 5
ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
و هر‌که بنشیند بر هر‌چه صاحب جریان بر آن نشسته بود، رخت خود را بشوید و به آب غسل کند، وتا شام نجس باشد. ۶ 6
ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
و هر‌که بدن صاحب جریان رالمس کند رخت خود را بشوید و به آب غسل کند و تا شام نجس باشد. ۷ 7
ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಆ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
و اگر صاحب جریان، بر شخص طاهر آب دهن اندازد، آن کس رخت خود را بشوید، و به آب غسل کند، و تا شام نجس باشد. ۸ 8
ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
و هر زینی که صاحب جریان بر آن سوارشود، نجس باشد. ۹ 9
ಸ್ರಾವವುಳ್ಳವನು ಕುಳಿತ್ತಿದ್ದ ತಡಿಯು ಅಶುದ್ಧವು.
و هر‌که چیزی را که زیر اوبوده باشد لمس نماید تا شام نجس بوده، و هر‌که این چیزها را بردارد، رخت خود را بشوید، و به آب غسل کند و تا شام نجس باشد. ۱۰ 10
೧೦ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಅಂತಹ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
و هر کسی را که صاحب جریان لمس نماید، و دست خود رابه آب نشسته باشد، رخت خود را بشوید، وبه آب غسل کند و تا شام نجس باشد. ۱۱ 11
೧೧ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು, ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
و ظرف سفالین که صاحب جریان آن را لمس نماید، شکسته شود، و هر ظرف چوبین به آب شسته شود. ۱۲ 12
೧೨ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.
و چون صاحب جریان از جریان خودطاهر شده باشد، آنگاه هفت روز برای تطهیرخود بشمارد، و رخت خود را بشوید و بدن خودرا به آب غسل دهد و طاهر باشد. ۱۳ 13
೧೩“‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
و در روزهشتم دو فاخته یا دو جوجه کبوتر بگیرد، و به حضور خداوند به در خیمه اجتماع آمده، آنها رابه کاهن بدهد. ۱۴ 14
೧೪ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
و کاهن آنها را بگذراند، یکی برای قربانی گناه و دیگری برای قربانی سوختنی. و کاهن برای وی به حضور خداوند جریانش راکفاره خواهد کرد. ۱۵ 15
೧೫ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗಾಗಿ ದೋಷಪರಿಹಾರ ಮಾಡುವನು.
و چون منی از کسی درآیدتمامی بدن خود را به آب غسل دهد، وتا شام نجس باشد. ۱۶ 16
೧೬“‘ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು, ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
و هر رخت و هر چرمی که منی برآن باشد به آب شسته شود، و تا شام نجس باشد. ۱۷ 17
೧೭ಯಾವ ಬಟ್ಟೆಯ ಮೇಲಾಗಲಿ ಅಥವಾ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದ ವರೆಗೆ ಅಶುದ್ಧವಾಗಿರುವುದು.
و هر زنی که مرد با او بخوابد و انزال کند، به آب غسل کنند و تا شام نجس باشند. ۱۸ 18
೧೮ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
«و اگر زنی جریان دارد، و جریانی که دربدنش است خون باشد، هفت روز در حیض خودبماند. و هر‌که او را لمس نماید، تا شام نجس باشد. ۱۹ 19
೧೯“‘ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
و بر هر چیزی که در حیض خود بخوابدنجس باشد، و بر هر چیزی که بنشیند نجس باشد. ۲۰ 20
೨೦ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರು ಅಥವಾ ಕುಳಿತುಕೊಂಡರು ಅದು ಅಶುದ್ಧವಾಗಿರುವುದು.
و هر‌که بستر او را لمس کند، رخت خود را بشوید، و به آب غسل کند و تا شام نجس باشد. ۲۱ 21
೨೧ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
و هر‌که چیزی را که او بر آن نشسته بود لمس نماید رخت خود را بشوید، و به آب غسل کند، وتا شام نجس باشد. ۲۲ 22
೨೨ಅವಳು ಯಾವುದರ ಮೇಲೆ ಕುಳಿತ್ತಿದ್ದಳೋ ಅದನ್ನು ಮುಟ್ಟಿದವರು ಅವರ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವರು ಸಾಯಂಕಾಲದ ವರೆಗೆ ಅಶುದ್ಧರಾಗಿರುವರು.
و اگر آن بر بستر باشد یا برهر چیزی که او بر آن نشسته بود، چون آن چیز رالمس کند تا شام نجس باشد. ۲۳ 23
೨೩ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಅಥವಾ ಕುಳಿತ್ತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
و اگر مردی با اوهم بستر شود و حیض او بر وی باشد تا هفت روزنجس خواهد بود. و هر بستری که بر آن بخوابدنجس خواهد بود. ۲۴ 24
೨೪ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿದರೆ, ಅವಳ ಋತುಸ್ರಾವ ಅವನಿಗೆ ತಗುಲಿದರೆ, ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.
و زنی که روزهای بسیار، غیر از زمان حیض خود جریان خون دارد، یازیاده از زمان حیض خود جریان دارد، تمامی روزهای جریان نجاستش مثل روزهای حیضش خواهد بود. او نجس است. ۲۵ 25
೨೫“‘ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು.
و هر بستری که درروزهای جریان خود بر آن بخوابد، مثل بسترحیضش برای وی خواهد بود. و هر چیزی که برآن بنشیند مثل نجاست حیضش نجس خواهدبود. ۲۶ 26
೨೬ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.
و هر‌که این چیزها را لمس نماید نجس می‌باشد. پس رخت خود را بشوید و به آب غسل کند و تا شام نجس باشد. ۲۷ 27
೨೭ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದ್ದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದ ವರೆಗೆ ಅಶುದ್ಧನಾಗಿರುವನು.
و اگر از جریان خودطاهر شده باشد، هفت روز برای خود بشمارد، وبعد از آن طاهر خواهد بود. ۲۸ 28
೨೮ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕ ಹಾಕಿಕೊಂಡ ತರುವಾಯ ಶುದ್ಧಳಾಗುವಳು.
و در روز هشتم دوفاخته یا دو جوجه کبوتر بگیرد، و آنها را نزد کاهن به در خیمه اجتماع بیاورد. ۲۹ 29
೨೯ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
و کاهن یکی رابرای قربانی گناه و دیگری را برای قربانی سوختنی بگذراند. و کاهن برای وی نجاست جریانش را به حضور خداوند کفاره کند. ۳۰ 30
೩೦ಯಾಜಕನು ದೋಷಪರಿಹಾರಕ ಯಜ್ಞಕ್ಕಾಗಿ ಒಂದನ್ನು ಮತ್ತು ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನು ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು.
پس بنی‌اسرائیل را از نجاست ایشان جدا خواهیدکرد، مبادا مسکن مرا که در میان ایشان است نجس سازند و در نجاست خود بمیرند.» ۳۱ 31
೩೧“‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.
این است قانون کسی‌که جریان دارد، و کسی‌که منی از وی درآید و از آن نجس شده باشد. ۳۲ 32
೩೨“‘ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,
و حایض درحیضش و هر‌که جریان دارد خواه مرد خواه زن، و مردی که با زن نجس همبستر شود. ۳۳ 33
೩೩ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀ ಮತ್ತು ಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗಮಿಸಿದವನು ಇವರ ವಿಷಯವಾಗಿ ಇದೇ ನಿಯಮ’” ಎಂದು ಹೇಳಿದನು.

< لاویان 15 >