< Juan 3 >

1 Y había un hombre de los Fariseos que se llamaba Nicodemo, príncipe de los Judíos.
ಫರಿಸಾಯರಲ್ಲಿ ಯೆಹೂದ್ಯರ ಹಿರೀಸಭೆಯವನಾದ ನಿಕೊದೇಮನೆಂಬ ಒಬ್ಬ ಮನುಷ್ಯನಿದ್ದನು.
2 Este vino a Jesús de noche, y le dijo: Rabbi, sabemos que eres un maestro venido de Dios; porque nadie puede hacer estos milagros que tú haces, si no fuere Dios con él.
ಅವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ, “ಗುರುವೇ, ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು. ನೀನು ಮಾಡುವಂಥ ಈ ಸೂಚಕ ಕಾರ್ಯಗಳನ್ನು ದೇವರ ಸಹಾಯವಿಲ್ಲದೆ ಮಾಡುವುದು ಯಾರಿಂದಲೂ ಆಗದು” ಎಂದು ಹೇಳಿದನು.
3 Respondió Jesús, y le dijo: De cierto, de cierto te digo, que el que no naciere otra vez, no puede ver el reino de Dios.
ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನುಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.
4 Dícele Nicodemo: ¿Cómo puede el hombre nacer, siendo viejo? ¿puede entrar segunda vez en el vientre de su madre, y nacer?
ನಿಕೊದೇಮನು ಆತನನ್ನು, “ಮನುಷ್ಯನು ಮುದುಕನಾದ ಮೇಲೆ ತಿರುಗಿ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಕ್ಕಾದೀತೇ?” ಎಂದು ಕೇಳಿದನು.
5 Respondió Jesús: De cierto, de cierto te digo, que el que no renaciere de agua y del Espíritu, no puede entrar en el reino de Dios.
ಅದಕ್ಕೆ ಯೇಸು “ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಮತ್ತು ಆತ್ಮನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದಲ್ಲಿ ಪ್ರವೇಶಿಸಲಾರನು.
6 Lo que es nacido de la carne, carne es; y lo que es nacido del Espíritu, espíritu es.
ದೇಹದಿಂದ ಹುಟ್ಟಿದ್ದು ದೇಹವೇ, ಆತ್ಮನಿಂದ ಹುಟ್ಟಿದ್ದು ಆತ್ಮವೇ.
7 No te maravilles de que te dije: Necesario os es nacer otra vez.
‘ನೀವು ಹೊಸದಾಗಿ ಹುಟ್ಟಬೇಕು’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ
8 El viento de donde quiere sopla; y oyes su sonido, mas ni sabes de donde viene, ni donde vaya: así es todo aquel que es nacido del Espíritu.
ಗಾಳಿಯು ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಆತ್ಮನಿಂದ ಹುಟ್ಟಿದವರೆಲ್ಲರೂ ಅದರಂತೆಯೇ” ಎಂದನು.
9 Respondió Nicodemo, y le dijo: ¿Cómo puede ser esto?
ಅದಕ್ಕೆ ನಿಕೊದೇಮನು “ಇದೆಲ್ಲಾ ಹೇಗೆ ಸಾಧ್ಯ?” ಎಂದಾಗ,
10 Respondió Jesús, y le dijo: ¿Tú eres un maestro de Israel, y no sabes esto?
೧೦ಯೇಸು ಅವನಿಗೆ ಹೇಳಿದ್ದೇನಂದರೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಈ ಸಂಗತಿಗಳು ತಿಳಿಯುವುದಿಲ್ಲವೋ?
11 De cierto, de cierto te digo, que lo que sabemos hablamos; y lo que hemos visto, testificamos, y no recibís nuestro testimonio.
೧೧ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ನೋಡಿದ್ದಕ್ಕೆ ಸಾಕ್ಷಿ ಕೊಡುತ್ತೇವೆ. ಆದರೂ ನೀವು ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.
12 Si os he dicho cosas terrenales, y no creéis: ¿cómo creeréis, si os dijere cosas celestiales?
೧೨ನಾನು ಭೂಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?
13 Y nadie subió al cielo, sino el que descendió del cielo, es a saber, el Hijo del hombre, que está en el cielo.
೧೩ಪರಲೋಕದಿಂದ ಇಳಿದು ಬಂದವನೇ, ಅಂದರೆ, ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.
14 Y como Moisés levantó la serpiente en el desierto, así es necesario que el Hijo del hombre sea levantado:
೧೪ಇದಲ್ಲದೆಮೋಶೆಯು ಅಡವಿಯಲ್ಲಿ ಕಂಚಿನ ಸರ್ಪವನ್ನು ಮೇಲೆ ಎತ್ತಿ ನಿಲ್ಲಿಸಿದ ಹಾಗೆಯೇ ಮನುಷ್ಯಕುಮಾರನು ಸಹ ಮೇಲಕ್ಕೆ ಎತ್ತಲ್ಪಡಬೇಕು.
15 Para que todo aquel que en él creyere, no se pierda, mas tenga vida eterna. (aiōnios g166)
೧೫ಹೀಗೆ ಆತನನ್ನು ನಂಬುವವರೆಲ್ಲರೂ ನಿತ್ಯಜೀವವನ್ನು ಹೊಂದುವರು. (aiōnios g166)
16 Porque de tal manera amó Dios al mundo, que haya dado a su Hijo unigénito; para que todo aquel que en él creyere, no se pierda, mas tenga vida eterna. (aiōnios g166)
೧೬“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. (aiōnios g166)
17 Porque no envió Dios a su Hijo al mundo, para que condene al mundo; sino para que el mundo sea salvo por él.
೧೭ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ಅಪರಾಧಿಯೆಂದು ಖಂಡಿಸಲಿಕ್ಕೆ ಕಳುಹಿಸಲಿಲ್ಲ.
18 El que en él cree, no es condenado; mas el que no cree, ya es condenado; porque no creyó en el nombre del unigénito Hijo de Dios.
೧೮ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.
19 Y ésta es la condenación, que la luz vino al mundo, y los hombres amaron más las tinieblas que la luz; porque sus obras eran malas.
೧೯ಆ ತೀರ್ಪು ಏನೆಂದರೆಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.
20 Porque todo aquel que hace lo malo, aborrece la luz, y no viene a la luz, porque sus obras no sean redargüidas.
೨೦ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ.
21 Mas el que obra verdad, viene a la luz, para que sus obras sean hechas manifiestas, porque son hechas en Dios.
೨೧ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”
22 Pasado esto, vino Jesús y sus discípulos a una tierra de Judea; y estaba allí con ellos, y bautizaba.
೨೨ಆ ಮೇಲೆ ಯೇಸು ತನ್ನ ಶಿಷ್ಯರೊಡನೆ ಯೂದಾಯ ದೇಶಕ್ಕೆ ಬಂದು ಅಲ್ಲಿ ಅವರ ಜೊತೆ ಇದ್ದು, ದೀಕ್ಷಾಸ್ನಾನ ಕೊಡುತ್ತಿದ್ದನು.
23 Y bautizaba también Juan en Enón junto a Salim, porque había allí muchas aguas; y venían, y eran bautizados.
೨೩ಇದಲ್ಲದೆ ಯೋಹಾನನೂ ಸಹ ಸಾಲಿಮ್ ಎಂಬ ಊರಿಗೆ ಹತ್ತಿರವಿರುವ ಐನೋನೆಂಬ ಸ್ಥಳದಲ್ಲಿದ್ದು ದೀಕ್ಷಾಸ್ನಾನ ಕೊಡುತ್ತಿದ್ದನು, ಏಕೆಂದರೆ, ಅಲ್ಲಿ ಬಹಳ ನೀರಿತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.
24 Porque aun Juan no había sido puesto en la cárcel.
೨೪ಆಗ ಇನ್ನೂ ಯೋಹಾನನ್ನು ಸೆರೆಮನೆಯಲ್ಲಿ ಹಾಕಿರಲಿಲ್ಲ.
25 Y hubo una cuestión entre algunos de los discípulos de Juan y los Judíos acerca de la purificación.
೨೫ಹೀಗಿರಲಾಗಿ ಯೋಹಾನನ ಶಿಷ್ಯರಲ್ಲಿ ಕೆಲವರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಾದ ಉಂಟಾಯಿತು.
26 Y vinieron a Juan, y le dijeron: Rabbi, el que estaba contigo de la otra parte del Jordán, del cual tú diste testimonio, he aquí, bautiza, y todos vienen a él.
೨೬ಆಗ ಅವರು ಯೋಹಾನನ ಬಳಿಗೆ ಬಂದು ಅವನಿಗೆ “ಗುರುವೇ, ಯೊರ್ದನ್ ನದಿಯ ಆಚೆ ನಿನ್ನ ಬಳಿಯಲ್ಲಿದ್ದ ಒಬ್ಬನ ವಿಷಯದಲ್ಲಿ ನೀನು ಸಾಕ್ಷಿ ಕೊಟ್ಟೆಯಲ್ಲಾ, ಇಗೋ, ಆತನು ದೀಕ್ಷಾಸ್ನಾನ ಕೊಡುತ್ತಿದ್ದಾನೆ, ಆತನ ಬಳಿಗೆ ಎಲ್ಲರೂ ಹೋಗುತ್ತಿದ್ದಾರೆ.” ಎಂದು ಹೇಳಲು
27 Respondió Juan, y dijo: No puede el hombre recibir algo si no le fuere dado del cielo.
೨೭ಯೋಹಾನನು “ಪರಲೋಕದಿಂದ ಅನುಗ್ರಹಿಸದ ಹೊರತು ಮನುಷ್ಯನು ಏನ್ನನ್ನೂ ಹೊಂದಲಾರನು.
28 Vosotros mismos me sois testigos que dije: Yo no soy el Cristo; mas soy enviado delante de él.
೨೮‘ನಾನು ಕ್ರಿಸ್ತನಲ್ಲ,’ ಆದರೆ ‘ಆತನಿಗೆ ಮುಂದಾಗಿ ಕಳುಹಿಸಲ್ಪಟ್ಟವನಾಗಿದ್ದೇನೆ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.
29 El que tiene la esposa, es el esposo; mas el amigo del esposo, que está en pie y le oye, se goza grandemente de la voz del esposo. Así, pues, éste mi gozo es cumplido.
೨೯ಮದಲಗಿತ್ತಿಯುಳ್ಳವನೇ ಮದಲಿಂಗನು. ಆದರೂ ಮದಲಿಂಗನ ಗೆಳೆಯನು ಅವನ ಹತ್ತಿರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.
30 A él conviene crecer; mas a mí descrecer.
೩೦ಆತನು ವೃದ್ಧಿಯಾಗಬೇಕು ನಾನು ಕಡಿಮೆಯಾಗಬೇಕು, ಅಂದನು.
31 El que de arriba viene, sobre todos es: el que es de la tierra, terreno es, y cosas terrenas habla: el que viene del cielo, sobre todos es.
೩೧ಮೇಲಿನಿಂದ ಬರುವವನು ಎಲ್ಲರಿಗಿಂತಲೂ ಮೇಲಾದವನು, ಭೂಲೋಕದಿಂದ ಹುಟ್ಟಿದವನು ಭೂಲೋಕದವನಾಗಿದ್ದು ಭೂಲೋಕಕ್ಕೆ ಸಂಬಂಧಿಸಿದ ಮಾತುಗಳನ್ನು ಆಡುತ್ತಾನೆ. ಪರಲೋಕದಿಂದ ಬರುವವನು ಎಲ್ಲವುಗಳಿಗಿಂತಲೂ ಮೇಲಾದವನು.
32 Y lo que vio y oyó, esto testifica; y nadie recibe su testimonio.
೩೨ತಾನು ಕಂಡು ಕೇಳಿದ್ದಕ್ಕೆ ಸಾಕ್ಷಿ ಕೊಡುತ್ತಾನೆ. ಆದರೆ ಆತನ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.
33 El que recibe su testimonio, éste selló, que Dios es verdadero;
೩೩ಆತನ ಸಾಕ್ಷಿಯನ್ನು ಸ್ವೀಕರಿಸಿದವನು ದೇವರು ಸತ್ಯವಂತನೆಂದು ದೃಢಪಡಿಸುವವನಾಗಿದ್ದಾನೆ.
34 Porque el que Dios envió, las palabras de Dios habla; porque no le da Dios el Espíritu por medida.
೩೪ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
35 El Padre ama al Hijo, y todas las cosas dio en su mano.
೩೫ತಂದೆಯಾದ ದೇವರು ತನ್ನ ಮಗನನ್ನು ಪ್ರೀತಿಸಿ ಎಲ್ಲವನ್ನೂ ಆತನ ಕೈಯಲ್ಲಿ ಕೊಟ್ಟಿದ್ದಾನೆ.
36 El que cree en el Hijo, tiene vida eterna; mas el que al Hijo es incrédulo, no verá la vida; sino que la ira de Dios queda sobre él. (aiōnios g166)
೩೬ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.” (aiōnios g166)

< Juan 3 >